News Karnataka Kannada
Monday, May 06 2024
ಮಂಗಳೂರು

ಕಾಲ್ನಡಿಗೆಯ ಹಜ್ ಯಾತ್ರಿಕ ಶಿಹಾಬ್ ಚೊಟ್ಟೂರ್‌ಗೆ ತಲಪಾಡಿಯಲ್ಲಿ ಸ್ವಾಗತ

Untitled 2 Recovered
Photo Credit :

ಉಳ್ಳಾಲ: ಮಲಪ್ಪುರಂನಿಂದ ಪವಿತ್ರ ಹಜ್ ಯಾತ್ರೆಗೆ ಕಾಲ್ನಡಿಗೆಯಲ್ಲಿ ಹೊರಟಿರುವ ಶಿಹಾಬ್ ಚೊಟ್ಟೂರು ಗುರುವಾರ ಸಂಜೆ 5.30ಕ್ಕೆ ತಲಪಾಡಿ ಗಡಿ ಮೂಲಕ ದ.ಕ.ಜಿಲ್ಲೆಗೆ ಪ್ರವೇಶಿಸಿದ್ದು, ನೂರಾರು ಮಂದಿ ಭವ್ಯ ಸ್ವಾಗತ ನೀಡಿದರು.

ಸುಮಾರು 8600ಕ್ಕೂ ಅಧಿಕ ಕಿ.ಮೀ. ದೂರದಲ್ಲಿರುವ ಪವಿತ್ರ ಮಕ್ಕಾವನ್ನು 9 ತಿಂಗಳ ಅವಧಿಯ ಕಾಲ್ನಡಿಗೆಯಲ್ಲೇ ಕ್ರಮಿಸುವ ಸಂಕಲ್ಪ ಮಾಡಿರುವ ಶಿಹಾಬ್ ತಲಪಾಡಿ ಪ್ರವೇಶಿಸುತ್ತಲೇ ನೂರಾರು ಮಂದಿ ಬರಮಾಡಿಕೊಂಡರು.

ಗುರುವಾರ ಮಧ್ಯಾಹ್ನ ಕೇರಳದ ಹೊಸಂಗಡಿಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ಶಿಹಾಬ್ ಕೆಲವು ಹೊತ್ತು ವಿಶ್ರಾಂತಿ ಪಡೆದು ಬಳಿಕ ಯಾತ್ರೆ ಮುಂದುವರಿಸಿದರು. ಕೋಟೆಕಾರ್ ಸಮೀಪದ ಬೀರಿಯ ಮಸೀದಿಯಲ್ಲಿ ಮಗ್ರಿಬ್ ನಮಾಝ್ ನಿರ್ವಹಿಸಿದ ಶಿಹಾಬ್ ಅವರಿಗೆ ಸಾರ್ವಜನಿಕರು ಶುಭಕೋರಿದರು.

ಈ ಸಂದರ್ಭದಲ್ಲಿ ಭಾರೀ ಜನಜಂಗುಳಿ, ನೂಕು ನುಗ್ಗಲು ಉಂಟಾಗಿ ಶಿಹಾಬ್ ಅವರಿಗೆ ಸಾವಧಾನವಾಗಿ ನಡೆಯುವುದೇ ಕಷ್ಟವಾಯಿತು. ತಲಪಾಡಿಯಿಂದ ಬೀರಿವರೆಗೂ ಅವರನ್ನು ಸುತ್ತುವರೆದು ಹಿಂಬಾಲಿಸಿಕೊಂಡು ಬಂದ ಜನರ ಅತ್ಯುತ್ಸಾಹ ನೂಕಾಟ, ತಳ್ಳಾಟಕ್ಕೂ ಕಾರಣವಾಯಿತು.

ನಗರದ ಪಂಪ್‌ವೆಲ್‌ನ ತಖ್ವಾ ಮಸ್ಜಿದ್‌ನಲ್ಲಿ ರಾತ್ರಿ ತಂಗುವ ಬಗ್ಗೆ ಶಿಹಾಬ್ ನಿರ್ಧರಿಸಿದ್ದರೂ ಸಾರ್ವಜನಿಕರ ನೂಕುನುಗ್ಗಾಟದಿಂದ ಕ್ಲಪ್ತ ಸಮಯಕ್ಕೆ ನಿಗದಿತ ಸ್ಥಳವನ್ನು ತಲುಪಲು ಸಾಧ್ಯವಾಗಲಿಲ್ಲ. ಹಾಗಾಗಿ ಕೋಟೆಕಾರ್ ಬೀರಿಯ ಹನಫಿ ಮಸ್ಜಿದ್‌ನಲ್ಲೇ ರಾತ್ರಿ ತಂಗಿದರು.

ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್, ರಾಜ್ಯ ಹಜ್ ಕಮಿಟಿಯ ಮಾಜಿ ಸದಸ್ಯ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಮತ್ತಿತರರು ಶಿಹಾಬ್ ಅವರನ್ನು ಗಡಿಪ್ರದೇಶದಲ್ಲಿ ಬರ ಮಾಡಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು