Categories: ಮಂಗಳೂರು

ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಮೀನುಗಳ ಮಾರಣಹೋಮ

ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಮೀನುಗಳ ಮಾರಣಹೋಮವಾಗಿರುವುದು ಬೆಳಕಿಗೆ ಬಂದಿದೆ. ಸುಮಾರು ಮೂರು ಎಕ್ರೆಗೂ ಅಧಿಕವಿರುವ ಗುರುವಯ್ಯನ ಕೆರೆ ಎಂದೇ ಪ್ರಸಿದ್ಧವಾಗಿರುವ ಗುರುವಾಯನಕೆರೆಯಲ್ಲಿ ವಿಷ ಹಾಕಿರುವ ಅಥವಾ ಕೆಮಿಕಲ್ ರಿಯಾಕ್ಷನ್ ಆಗಿರುವ ಸಾಧ್ಯತೆ ಕುರಿತು ಅನುಮಾನ ವ್ಯಕ್ತವಾಗಿದೆ.

ಕಳೆದ ಒಂದೆರಡು ವಾರಗಳಿಂದ ಕೆರೆ ನೀರಿನ ಬಣ್ಣ ಬದಲಾಗಿರುವ ಕುರಿತು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಈ ಸಂಶಯಕ್ಕೆ ಪುಷ್ಟಿ ನೀಡುವಂತೆ ಇದೀಗ ಆದಿತ್ಯವಾರದಿಂದ ಸಣ್ಣಪುಟ್ಟ ಮೀನುಗಳು ಕೆರೆ ದಡದಲ್ಲಿ ಪ್ರಾಣಕಳೆದುಕೊಂಡು ತೇಲಾಡುತ್ತಿವೆ.

ಸರ್ವೇ ನಂ 15/ 1 ರಲ್ಲಿ 14.71 ಎಕ್ರೆ ವಿಸ್ತೀರ್ಣದ ಕೆರೆಯಾಗಿದ್ದು ಲಕ್ಷಕ್ಕೂ ಮಿಗಿಲು ಮೀನುಗಳು ಇಲ್ಲಿ ಆಶ್ರಯಪಡೆದಿವೆ. ಬಹು ಅಪೂರ್ವ ಮೀನುಗಳು ಕೆರೆಯಲ್ಲಿದ್ದು ವಿಷಪೂರಿತ ನೀರಿನಿಂದ ಎಲ್ಲಾ ಮೀನುಗಳ ಮಾರಣಹೋಮವಾಗಲಿದೆ.

ಈಗಾಗಲೆ ತಹಸೀಲ್ದಾರ್, ಕುವೆಟ್ಟು ಗ್ರಾ.ಪಂ. ಆಡಳಿತ ಮಂಡಳಿ, ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ನೀರಿನ ಪರೀಕ್ಷೆಗಾಗಿ ಮಾದರಿ ಸಂಗ್ರಹಿಸಲಾಗಿದೆ.

ಇಷ್ಟು ದೊಡ್ಡ ಕೆರೆಗೆ ಯಾವ ಪ್ರಮಾಣದಲ್ಲಿ ಕಿಡಿಗೇಡಿಗಳು ವಿಷ ಪ್ರಾಶನ ಮಾಡಿದ್ದಾರೆ ಅಥವಾ ಬೇರೆ ಯಾವುದಾದರೂ ರೂಪದಲ್ಲಿ ನದಿಗೆ ವಿಷಯುಕ್ತ ನೀರು ಸೇರಿದ್ದರಿಂದ ಈ ಪ್ರಮಾಣದಲ್ಲಿ ಮೀನುಗಳು ಸಾವನ್ನಪ್ಪಿದ್ದಾವೆಯೇ ಎಂಬುದರ ಕುರಿತು ತನಿಖೆ ನಡೆಯಬೇಕಿದೆ.

ಗುರುವಾಯನಕೆರೆಯ ಸುತ್ತ ಮುತ್ತಲಿನ ಜನರು ಕೆರೆಯ ನೀರನ್ನು ಉಪಯೋಗಿಸದಂತೆ ಮತ್ತು ಸಾಕು ಪ್ರಾಣಿಗಳಿಗೆ ನೀಡದಂತೆ ಧ್ವನಿವರ್ಧಕದ ಮೂಲಕ ಎಚ್ಚರಿಸಲಾಗುವುದು ಎಂದು ಪಿ.ಡಿ.ಓ. ತಿಳಿಸಿದ್ದಾರೆ.

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago