Categories: ಮಂಗಳೂರು

ಕೃಷಿ ಬೆಳೆದಾಗ ಮಾತ್ರ ದೇಶ ಬೆಳೆಯಲು ಸಾಧ್ಯ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ : ದೇಶದ 60-70 ಶೇ. ಮಂದಿ ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದು, ಕೃಷಿ ಬೆಳೆದಾಗ ಮಾತ್ರ ದೇಶ ಬೆಳೆಯಲು ಸಾಧ್ಯ. ಆರ್ಥಿಕ ಅಭಿವೃದ್ಧಿಯ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳಲ್ಲಿ ಬದಲಾವಣೆ ತಂದಿದ್ದು, ರೈತರ ಕಮಿಷನ್‌ನಲ್ಲಿ ಆದಾಯ ಪಡೆಯುವವರು ಇದನ್ನು ವಿರೋಧಿಸುತ್ತಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಬಂಟ್ವಾಳ ಬಿಜೆಪಿ ರೈತ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಮಾರೋಪ ಭಾಷಣ ಮಾಡಿದರು. ರೈತರ ವಿಶ್ವಾಸಗಳಿಸುವ ನಿಟ್ಟಿನಲ್ಲಿ ರೈತರ ಮನೆಗಳಲ್ಲೇ ಮೋರ್ಚಾದ ಸಭೆಗಳನ್ನು ಸಂಘಟಿಸುವ ಕೆಲಸ ಮಾಡಿ. ನಾವು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡಾಗ ಪ್ರಧಾನಿಗಳ ಬಲಿಷ್ಠ ಭಾರತ ನಿರ್ಮಾಣದ ಕನಸು ನನಸಾಗುತ್ತದೆ ಎಂದರು.
ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಅಣ್ಣಳಿಕೆ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಉಪಾಧ್ಯಕ್ಷ ಚಿದಾನಂದ, ಪಕ್ಷದ ಮುಂದಾಳು ಮಾಧವ ಮಾವೆ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ ಮಜಲು, ಬಂಟ್ವಾಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರೇಂದ್ರ ಸಜೀಪ ಮೊದಲಾದವರು ಉಪಸ್ಥಿತರಿದ್ದರು. ಬಂಟ್ವಾಳ ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಸ್ವಾಗತಿಸಿದರು. ಪ್ರಣಾಮ್ ಅಜ್ಜಿಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು.
Raksha Deshpande

Recent Posts

ಮೆಕ್ಯಾನಿಕ್‌ಗಳ ಬಗ್ಗೆ ಅವಹೇಳ ಹೇಳಿಕೆ : ಝೀ ವಾಹಿನಿ ವಿರುದ್ಧ ಗ್ಯಾರೇಜ್‌ ಮಾಲಿಕರ ಸಂಘ ಆಕ್ರೋಶ

ಇತ್ತೀಚೆಗಷ್ಟೆ ಝೀ ವಾಹಿಯಲ್ಲಿ ಪ್ರಸಾರವಾಗುವ ಮಹಾನಟಿ ಕಾರ್ಯಕ್ರಮದಲ್ಲಿ ಮೆಕ್ಯಾನಿಕ್‌ಗಳ ಬಗ್ಗೆ ಹೇಳಿಕೆ ನೀಡಲಾಗಿತ್ತು ಹಾಗೂ ತೀರ್ಪುಗಾರರ ವಿರುದ್ಧ ಕೇಸ್‌ ಕೂಡ…

5 mins ago

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್‌

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ.

11 mins ago

ಕುಟುಂಬಸ್ಥರೊಂದಿಗೆ ಈಜು ಕಲಿಯಲು ಹೋದ ಬಾಲಕ ನೀರುಪಾಲು

ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

27 mins ago

ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ.

49 mins ago

ಯುವತಿಯರೇ ಎಚ್ಚರ : ಮುಟ್ಟಿನ ನೋವಿಗೆ ಪೈನ್​​ ಕಿಲ್ಲರ್ ಸೇವಿಸಿ ಕೋಮಾಗೆ ಜಾರಿದ ಯುವತಿ

ಮುಟ್ಟಿನ ಸಮಯದಲ್ಲಿ ನೋವು ತಾಳಲಾರದೆ ಅನಿವಾರ್ಯಕ್ಕೆ ಪೈನ್​​ ಕಿಲ್ಲರ್ ಸೇವಿಸುವುದು ಈಗ ಸಾಮನ್ಯವಾಗಿಬಿಟ್ಟಿದೆ. ಕೆಲವರಿಗೆ ಇದರ ಪರಿಣಾಮವು ಅರಿವಾಗಿದೆ. ಆದರೂ…

1 hour ago

ಪೈಲಟ್‌ಗಳ ಸಾಮೂಹಿಕ ರಜೆ : 70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್‌ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌…

1 hour ago