ಮಂಗಳೂರು

ಕೈಕಂಬದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ವಿಧಾನ ಸಭಾ ಕ್ಷೇತ್ರದ ಕಚೇರಿ ಉದ್ಘಾಟನೆ

ಬಂಟ್ವಾಳ : ಮಾತು ಮಾತಿಗೆ ನಮ್ಮದು ಡಬ್ಬಲ್ ಇಂಜಿನ್ ‌ಸರಕಾರ ಎಂದು ಭಾಷಣ ಬಿಗಿಯುವ ಸಂಸದ ನಳಿನ್ ಕುಮಾರ್ ಕಟೀಲು ಅವರ ಡಬ್ಬಲ್ ಇಂಜಿನ್ ಸರಕಾರ ಯಾವುದೇ ಇಂಜಿನ್ ಇಲ್ಲದೆ ನಿಂತಿದೆ ಎಂದು ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಲೇವಡಿ ಮಾಡಿದ್ದಾರೆ.

ಅವರು ಬಿ.ಸಿ.ರೋಡಿನ ಕೈಕಂಬದಲ್ಲಿ ಇಂದು ಉದ್ಘಾಟನೆಗೊಂಡ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ವಿಧಾನ ಸಭಾ ಕ್ಷೇತ್ರದ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಾವಿರಾರು ಕೋಟಿ ರೂ ಹೆದ್ದಾರಿಯ ನಿರ್ವಹಣೆಗೆ ಎಂದು ಪ್ರತಿ ವರ್ಷ ಅನುದಾನ ಮಂಜೂರಾಗಿದ್ದರೂ ಹೆದ್ದಾರಿ ನಿರ್ವಹಣೆಯಾಗದೆ ಜನರ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಜಿಲ್ಲೆಯಲ್ಲಿನ ಪ್ರತಿ ಸರ್ವೀಸ್ ರೋಡ್ ಗಳ ಸಮಸ್ಯೆ ಇನ್ನೂ ಸರಿಯಾಗಿಲ್ಲ, ಜಿಲ್ಲೆಯಲ್ಲಿ ಡ್ರಗ್ ಮಾಫಿಯಾ ಬಗ್ಗುಬಡಿಯಲು ಪೋಲೀಸ್ ಇಲಾಖೆಯಿಂದ ಮಾಡಲು ಸಾಧ್ಯವಾಗಿಲ್ಲ, ಅಕ್ರಮ ಮರಳು ಮಾಫಿಯ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲದೆ ಇರುವಾಗ ನಳಿನ್ ಕುಮಾರ್ ಕಟೀಲು ಅವರು ಬೇರೆ ರಾಜ್ಯದ ಬಗ್ಗೆ ಮಾತನಾಡುತ್ತಾರೆ ಆದರೆ ಅವರ ಜಿಲ್ಲೆಯಲ್ಲಿ ರುವ ಸಮಸ್ಯೆಗಳನ್ನು ಮೊದಲು ಪರಿಹರಿಸಲಿ ಎಂದು ಅವರು ಹೇಳಿದರು.

ಇಲ್ಲಿನ ಶಾಸಕರ ಬಿಸಿರೋಡು ಸೌಂದರ್ಯದ ಘೋಷಣೆ ಕೇವಲ ಘೋಷಣೆ ಯಾಗಿ ಬಿಟ್ಟಿದೆ, ಮಾಜಿ ಸಚಿವರ ಸಮಯದಿಂದಲೂ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಿಲ್ಲ ಎಂದು ಆರೋಪ ಮಾಡಿದ ಅವರು ಎಲ್ಲಾ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಪರಿಹಾರ ಮಾಡದಿದ್ದರೆ ಎಸ್.ಡಿ.ಪಿ.ಐ ಸಂಘಟನೆ ಸಮಸ್ಯೆ ಪರಿಹಾರಕ್ಕಾಗಿ ಹೋರಾಟದ ಹಾದಿ ಹಿಡಿಯುತ್ತೇವೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಬೆಂಜನಪದವು ಕ್ರೀಡಾಂಗಣ ಮಂಜೂರಾದರೂ ಕ್ರೀಡಾಂಗಣದ ಕಾಮಗಾರಿ ಯಾವುದೇ ನಡೆದಿಲ್ಲ ಎಂದವರು ಆರೋಪಿಸಿದರು.

ಹಿಜಾಬ್ ಬಗ್ಗೆ ನಿಮ್ಮ ನಿಲುವು ಏನು ಎಂದು ಪತ್ರಕರ್ತರೋವರ ಪ್ರಶ್ನೆಗೆ ಉತ್ತರಿಸಿದ ರಾಜ್ಯ ದ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಹಿಜಾಬ್ ಧರಿಸುವುದು ವ್ಯಕ್ತಿ ಸ್ವಾತಂತ್ರ್ಯ. ಯಾವುದೇ ವ್ಯಕ್ತಿಯ ಧಾರ್ಮಿಕ ವಿಚಾರಕ್ಕೆ ಧಕ್ಕೆಯಾದಾಗ ಮಾನವ ಹಕ್ಕಿನ ಪರ ನಿಲ್ಲುವುದು ನೈತಿಕ ಬೆಂಬಲ ನೀಡುವುದು ಪಕ್ಷದ ಜವಬ್ದಾರಿ ಯಾಗಿದೆ. ಅಭಿವೃದ್ಧಿ ವಿಚಾರವನ್ನು ಮುಂದಿಟ್ಟು ಕೊಂಡು ರಾಜಕಾರಣ ಮಾಡುವುದು ಬಿಟ್ಟು ಇಂತಹ ವಿಚಾರಗಳ ಮೂಲಕ ಅಶಾಂತಿ ಸೃಷ್ಟಿ ಮಾಡಬೇಡಿ ಎಂದು ಹೇಳಿದರು.

ರಾಷ್ಟ್ರೀಯ ಕಾರ್ಯದರ್ಶಿ ಇಲಿಯಾಸ್ ತುಂಬೆ, ಜಿಲ್ಲಾ ಅಧ್ಯಕ್ಷ ಅಬುಬಕ್ಕರ್ ಕುಳಾಯಿ ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

18 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

43 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

1 hour ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

3 hours ago