News Karnataka Kannada
Saturday, May 04 2024
ಮಂಗಳೂರು

ಕೊರಗಜ್ಜ ಕ್ಷೇತ್ರ ಅಪವಿತ್ರಗೊಳಿಸಿದ ಆರೋಪಿಗೆ ಎಚ್ಚರಿಕೆ ನೀಡಿದ ಕ್ರಿಶ್ಚಿಯನ್ ವ್ಯಕ್ತಿ

Mangalore News
Photo Credit :

ಮಂಗಳೂರು : ದಕ್ಷಿಣಕನ್ನಡ ಹೆಸರಾಂತ ಹಾಗೂ ಕಾರ್ಣಿಕದ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಯ ವಿರುದ್ಧ ಇದೀಗ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರು ಗುಡುಗಿದ್ದು, ಭಾರಿ ಎಚ್ಚರಿಕೆಯನ್ನೇ ನೀಡಿದ್ದಾರೆ. ಜೈಲಿನಲ್ಲಿರುವ ಆರೋಪಿ ಹೊರಗೆ ಬಂದರೆ ಆತನ ಕೈ-ಕಾಲು ಕಡಿಯುತ್ತೇನೆ ಎಂಬುದಾಗಿ ಹೇಳಿದ್ದಾರೆ.

ಕೊರಗಜ್ಜ ಕ್ಷೇತ್ರವನ್ನು ಅಪವಿತ್ರಗೊಳಿಸಿದ್ದ ಆರೋಪದ ಮೇಲೆ  ಮಿತ್ರನಗರ ನಿವಾಸಿ ದೇವದಾಸ್ ದೇಸಾಯಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಆ ಆರೋಪಿ ವಿರುದ್ಧ ರೋಶನ್ ಡಿಸೋಜ ಎಂಬವರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಂಗಳೂರು ನಗರದ 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ್ದ ಆರೋಪಿ ದೇವದಾಸ್, ಕ್ರಿಶ್ಚಿಯನ್ ಧರ್ಮದ ಅನುಯಾಯಿ ಆಗಿದ್ದ. ಇಂಥವನಿಂದ ನಿಜವಾದ ಕ್ರೈಸ್ತರಿಗೆ ಬೇಸರವಾಗಿದೆ. ಇದೆಲ್ಲ ನ್ಯೂಲೈಫ್ ಪಂಥದವರ ಅವಾಂತರ ಎಂದು ಹೇಳಿರುವ ರೋಶನ್​, ದೇವದಾಸ್​ಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಆತ ಜೈಲಿನಿಂದ ಹೊರಗೆ ಬಂದರೆ ಅವನ ಕೈ-ಕಾಲು ಕಡಿಯುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು