News Karnataka Kannada
Tuesday, April 30 2024
ಮಂಗಳೂರು

ಕೊರಗರ ಮೇಲೆ ದಾಖಲಾಗಿರುವ ಎಫ್ಐಆರ್ ತಕ್ಷಣ ರದ್ದುಗೊಳಿಸಿ : ಡಾ. ಜಿ ಪರಮೇಶ್ವರ್

I am not the reason why Dr Rafeeq Ahmed was denied ticket: Dr Parameshwara
Photo Credit :

ಮಂಗಳೂರು: ಕೋಟಾದಲ್ಲಿ ಕೊರಗ ಸಮುದಾಯದವರ ಮದ್ವೆ ಕಾರ್ಯಕ್ರಮದ ವೇಳೆ ಪೊಲೀಸರು ಮಾಡಿದ ದೌರ್ಜನ್ಯ ಪ್ರಕರಣಗಳಲ್ಲಿ ಕೊರಗರ ಮೇಲೆ ದಾಖಲಾಗಿರುವ ಎಫ್ಐಆರ್ ತಕ್ಷಣವೇ ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಕಾಂಗ್ರೆಸ್ ಮುಖಂಡ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಆಗ್ರಹಿಸಿದ್ದಾರೆ

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರಗರ ಮದುವೆ ಸಮಾರಂಭದ ಸಂದರ್ಭದಲ್ಲಿ ಬೇರೆ ಬೇರೆ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಅವರನ್ನು ಪ್ರಶ್ನಿಸದೆ ಬಡ ಜನರ ಮೇಲೆ ಏಕಾಏಕಿ ಹಲ್ಲೆ ಮಾಡಿ ಅವರ ಮೇಲೆ ಎಫ್ಐಆರ್ ಮಾಡಿದ್ದಾರೆ ತಕ್ಷಣವೇ ಅವರ ಮೇಲಿನ ಎಫ್ಐಆರ್ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ವಿವಾದ ಕುರಿತಂತೆ ಪ್ರತಿಕ್ರಿಯಿಸಿದ ಪರಮೇಶ್ವರ್ ನಾರಾಯಣಗುರುಗಳು ಪ್ರಚೋದನಕಾರಿ ವಿಚಾರ ತಿಳಿಸಿದ ಅಂಥವರಲ್ಲ ಅವರು ಸಮಾನತೆಯ ಪ್ರತಿಪಾದಕರು ಸಮಾಜಕ್ಕೆ ಒಳ್ಳೆಯದು ಮಾಡಿದವರು ಅಂಥವರ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ಯಾಕೆ ತಿರಸ್ಕಾರ ಮಾಡಿದ್ದಾರೆ ಎಂಬುದಕ್ಕೆ ಸರಿಯಾದ ವಿವರಣೆಯನ್ನು ಕೊಟ್ಟಿಲ್ಲ ತಕ್ಷಣ ಈ ನಿರ್ಧಾರವನ್ನು ಬದಲಾಯಿಸಿ ಗಣರಾಜ್ಯೋತ್ಸವದಂದು ಪೆರೇಡ್ ನಲ್ಲಿ ನಾರಾಯಣಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಕೊಡಬೇಕೆಂದು ಆಗ್ರಹಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು