Categories: ಮಂಗಳೂರು

ಕೊರಗರ ಮೇಲೆ ದೌರ್ಜನ್ಯ ಪ್ರಕರಣ: ನಾವು ಸಿಒಡಿ ತನಿಖೆಗೆ ಒಪ್ಪುವುದಿಲ್ಲ- ಯು ಟಿ ಖಾದರ್

ಮಂಗಳೂರು : ಉಡುಪಿ ಜಿಲ್ಲೆ ಕೋಟತಟ್ಟು ಗ್ರಾಮದಲ್ಲಿ ಮೆಹಂದಿ ಕಾರ್ಯಕ್ರಮ ನಡೆಸುತ್ತಿದ್ದ ಕೊರಗರ ಮೇಲೆ ಪೊಲೀಸರು ದೌರ್ಜನ್ಯ ಪ್ರಕರಣದ ಬಗ್ಗೆ ಸಿಒಡಿ ತನಿಖೆಯ ಬದಲು ಹಾಲಿ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಯು ಟಿ ಖಾದರ್ ಆಗ್ರಹಿಸಿದ್ದಾರೆ.

ಕೊರಗರ ಮೇಲೆ ಹಲ್ಲೆ ಪ್ರಕರಣದ ಸಿಒಡಿ ತನಿಖೆ ಕಣ್ಣೊರೆಸುವ ತಂತ್ರ; ನಿ.ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಯು ಟಿ ಖಾದರ್ ಆಗ್ರಹ
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಸರ್ಕಾರ ಸಿಒಡಿ ತನಿಖೆಗೆ ವಹಿಸಿದೆ. ಪೊಲೀಸರು ಮಾಡಿದ ದೌರ್ಜನ್ಯವನ್ನು ಪೊಲೀಸ್ ಅಧಿಕಾರಿಗಳೇ ಇರುವ ಸಿಒಡಿ ಯಿಂದ ಮಾಡಿಸುವುದು ಕಣ್ಣೊರೆಸುವ ತಂತ್ರ. ಇದರಿಂದಾಗಿ ನ್ಯಾಯ ಸಿಗಲು ಸಾಧ್ಯವಿಲ್ಲ. ನಾವು ಸಿಒಡಿ ತನಿಖೆಗೆ ಒಪ್ಪುವುದಿಲ್ಲ. ಈ ಬಗ್ಗೆ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ದಬ್ಬಾಳಿಕೆ ನಡೆಸಿದ ಇತರ ಪೊಲೀಸರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೊರಗರ ಮೇಲೆ ಹಾಕಲಾದ ಸುಳ್ಳು ಮೊಕದ್ದಮೆ ವಾಪಸ್ ಪಡೆಯಬೇಕು. ಅನ್ಯಾಯಕ್ಕೊಳಗಾದವರಿಗೆ ಶೀಘ್ರ ಪರಿಹಾರ ಕೊಡಬೇಕು ‌ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಪರಿವರ್ತನವಾದ ಮೈಸೂರು ವಿಭಾಗೀಯ ಸಂಚಾಲಕ ಅಶೋಕ್ ಕೊಂಚಾಡಿ ಅವರು ಈ ದೌರ್ಜನ್ಯದ ವಿರುದ್ಧ ಕಚ್ಚೂರು ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ಅಥವಾ ಎಸ್‌ಪಿ ಕಚೇರಿವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

Gayathri SG

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

19 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

36 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

53 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago