News Karnataka Kannada
Tuesday, April 30 2024
ಮಂಗಳೂರು

ಕೋಟೆಕಾರು ಪಟ್ಟಣ ಪಂಚಾಯತ್‍ನಲ್ಲಿ 11 ಸ್ಥಾನಗಳ ಪಡೆದು ಬಹುಮತ ಪಡೆದ ಬಿಜೆಪಿ

Some MLAs from coastal karnataka likely to lose tickets: Shah
Photo Credit :

ಕೋಟೆಕಾರು ಪಟ್ಟಣ ಪಂಚಾಯತ್‍ನ ಮತ ಎಣಿಕೆ ಮಂಗಳೂರು ತಾಲೂಕು ಪಂಚಾಯತ್‍ನಲ್ಲಿ ಗುರುವಾರ ನಡೆದಿದ್ದು, 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡಿದೆ.

ಕಳೆದ ಬಾರಿ 11 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ 11 ಸ್ಥಾನಗಳನ್ನು ಪಡೆದರೆ ಕಳೆದ ಬಾರಿ 4 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 4 ಸ್ಥಾನಗಳನ್ನು ಉಳಿಸಿಕೊಂಡರೆಪಡೆದರೆ ಒಂದು ಸ್ಥಾನ ಪಡೆದಿದ್ದ ಎಸ್‍ಡಿಪಿಐ ಒಂದೇ ಸ್ಥಾನವನ್ನು ಉಳಿಸಿಕೊಂಡಿದೆ.

ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನವನ್ನು ಪಡೆದುಕೊಂಡರೆ, ಕಳೆದ ಬಾರಿ ಒಂದು ಸ್ಥಾನ ಪಡೆದಿದ್ದ ಸಿಪಿಐಎಂ ಈ ಬಾರಿ ಶೂನ್ಯ ಸಂಪಾದನೆ ಮಾಡಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 17 ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರೆ, ಎಸ್‍ಡಿಪಿಐ 6 ಸ್ಥಾನಗಳಲ್ಲಿ ಮೂರು ಸ್ಥಾನಗಳಲ್ಲಿ ಪಕ್ಷೇತರರು, ಸಿಪಿಐ ಎಂ 2ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರು.

ಮೂರು ಮತಗಳ ಅಂತರದಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿ :

ವಾರ್ಡ್ 13: ಪನೀರ್ ಲ್ಲಿ‌ಕಾಂಗ್ರಸ್ ಅಭ್ಯರ್ಥಿ ಸಫೀಯಾ ಅವತು ಎಸ್ಡಿಪಿಐಯ ಸೆಲಿಮಾಬಿ ಹಸೀನಾ ಶಮೀರ್ ಅವರ ಎದುರು ಮೂರು ಮತಗಳ ಅಂತರದಲ್ಲಿ ಸೋಲನ್ನನುಭವಿಸಿದರು. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಫೀಯಾ 226 ಮತಗಳನ್ನು ಪಡೆದರೆ ವಿಜೇತ ಎಸ್ ಡಿಪಿಐ ಅಭ್ಯರ್ಥಿ ಸೆಲಿಮಾಬಿ ಹಸೀನಾ 229 ಅಲ್ಪ‌ಮತಗಳ ಜಯಗಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು