News Karnataka Kannada
Monday, April 29 2024
ಮಂಗಳೂರು

ಕೋವಿಡ್ ಭೀತಿ : ಮಂಗಳೂರು ವ್ಯಾಪ್ತಿಯಲ್ಲಿ ತಡೆಗಟ್ಟಲು ಮುಂಜಾಗೃತಿ ಕ್ರಮ ಜಾರಿ

Manglore
Photo Credit :

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 3ನೇ ಅಲೆ ಭೀತಿಯನ್ನು ಸಮರ್ಪಕವಾಗಿ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತಿ ಕ್ರಮಗಳ ಕುರಿತು ಮಹಾನಗರಪಾಲಿಕೆಯ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ಇಂಜಿನಿಯರಿಂಗ್ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರೊಂದಿಗೆ ಮಂಗಳಾ ಸಭಾಂಗಣದಲ್ಲಿ ದಿನಾಂಕ : 30-11-2021ರಂದು ಮಹಾನಗರಪಾಲಿಕೆಯ ಆಯುಕ್ತರಾದ ಅಕ್ಷಯ್ ಶ್ರೀಧರ್‍ರವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

  •  ಸದ್ರಿ ಸಭೆಯಲ್ಲಿ ಮಂಗಳೂರು ನಗರಕ್ಕೆ ಪ್ರವೇಶಿಸುವ ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ಟೆಸ್ಟನ್ನು ಮಾಡತಕ್ಕದ್ದು, ಹಾಗೂ ಬಂದು ಏಳು ದಿನ ಕಳೆದ ಕೂಡಲೇ ಮಗದೊಮ್ಮೆ ಆರ್.ಟಿ.ಪಿ.ಸಿ.ಆರ್ ಟೆಸ್ಟನ್ನು ಕಡ್ಡಾಯವಾಗಿ ಮಾಡತಕ್ಕದ್ದು ಎಂದು ತೀರ್ಮಾನಿಸಲಾಯಿತು.
  • ಶಾಲಾ ಕಾಲೇಜುಗಳಲ್ಲಿ ಪ್ರಸ್ತುತ ಜರಗುವ ಎಲ್ಲಾ ಸಾಂಸ್ಕøತಿಕ ಕಾರ್ಯಕ್ರಮಗಳನ್ನು 2 ತಿಂಗಳವರೆಗೆ ಮುಂದೂಡಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
  • ಕಾಲೇಜುಗಳಲ್ಲಿ ಜರಗುವ ವಿವಿಧ ಕಾರ್ಯಾಗಾರ, ಸಮ್ಮೇಳನ ಹಾಗೂ ವಿಚಾರ ಗೋಷ್ಠಿಯನ್ನು ವರ್ಚುವಲ್ ಮೋಡ್ ಮುಖಾಂತರ ನಡೆಸಲು ಕ್ರಮಕೈಗೊಳ್ಳುವುದು.
  • ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಒಂದನೇ ಮತ್ತು ಎರಡನೇ ಡೋಸ್ ಕೊರೊನಾ ನಿಯಂತ್ರಣ ಲಸಿಕೆಯನ್ನು ಪಡೆದಿರುವ ಕುರಿತು ಖಚಿತಪಡಿಸಿಕೊಳ್ಳಲು ಕ್ರಮಕೈಗೊಳ್ಳುವುದು.
  • ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವ ಸಾರ್ವಜನಿಕರು / ವಿದ್ಯಾರ್ಥಿಗಳು ಕಡ್ಡಾಯವಾಗಿ 72 ಗಂಟೆ ಮೀರದ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ರಿಪೋರ್ಟನ್ನು ಹಾಜರುಪಡಿಸತಕ್ಕದ್ದು.
  • ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಿಂದ ಬರುವ ಮೆಡಿಕಲ್ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳು ಡಿಸಂಬರ್ 12 ರಿಂದ 27ರೊಳಗೆ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ಟೆಸ್ಟನ್ನು ಮಾಡಿಸತಕ್ಕದ್ದು.
  • ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಕೆಲಸ ಅಥವಾ ಶಿಕ್ಷಣ ನಿಮಿತ್ತ ದಿನನಿತ್ಯ ಪ್ರವೇಶಿಸುವವರು 14 ದಿನಗಳಿಗೊಮ್ಮೆ ಆರ್.ಟಿ.ಪಿ.ಸಿ.ಆರ್ ಟೆಸ್ಟನ್ನು ಕಡ್ಡಾಯವಾಗಿ ಮಾಡಿ ನೆಗೆಟಿವ್ ರಿಪೋರ್ಟನ್ನು ಪಡೆಯತಕ್ಕದ್ದು.
  • ಒಂದು ವೇಳೆ ಯಾವುದೇ ಕಾಲೇಜುಗಳಲ್ಲಿ ಒಮ್ಮಿಂದೊಮ್ಮೆಗೆ ಹಲವಾರು ಮಂದಿಗೆ ಕೊರೊನಾ ಪಾಸಿಟಿವ್ ಬಂದಲ್ಲಿ ಆ ವಿದ್ಯಾರ್ಥಿಗಳಿಗೆ ಕೊರೊನಾ ಮಾರ್ಗಸೂಚಿಯಂತೆ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳುವುದು ಹಾಗೂ ಅವರೊಂದಿಗೆ ಸಂಪರ್ಕವಿದ್ದ ಕೊರೊನಾ ನೆಗೆಟಿವ್ ವರದಿ ಬಂದ ವಿದ್ಯಾರ್ಥಿಗಳಿಗೆ 7 ದಿನಗಳವರೆಗೆ ಕ್ವಾರಂಟೈನ್‍ನಲ್ಲಿ ಇರಿಸುವಂತೆ ಕ್ರಮಕೈಗೊಂಡು 7 ದಿನಗಳ ನಂತರ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿ ನೆಗೆಟಿವ್ ರಿಪೋರ್ಟನ್ನು ಪಡೆಯತಕ್ಕದ್ದು.
  • ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಯಂತೆ ಮಾಸ್ಕ್ ಧರಿಸಿ ಸ್ಯಾನಿಟೈಸರ್ ಬಳಸುವಂತೆ ತಿಳಿಸಿದೆ.
  • ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಪಿ.ಜಿ ಗಳಲ್ಲಿ ವಾಸ್ತವ್ಯವಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆಯಾಯ ಕಾಲೇಜಿನ ಮುಖ್ಯಸ್ಥರು ಪಾಲಿಕೆಗೆ ಕಡ್ಡಾಯವಾಗಿ ನೀಡತಕ್ಕದ್ದು.
  • ಪ್ರತೀ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮಾಸ್ಟರ್ ನೋಡಲ್ ಆಫಿಸರ್ ಮತ್ತು ನೋಡಲ್ ಆಫಿಸರನ್ನು ನೇಮಿಸಿ ಕೊರೊನಾಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇದ್ದರು ಅವರ ಕಾಲೇಜು ವ್ಯಾಪ್ತಿಗೆ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡುವುದು.
  • ಬೇರೆ ರಾಜ್ಯಕ್ಕೆ ತೆರಳುವ ವಿದ್ಯಾರ್ಥಿಗಳು ಶಾಲಾ ಕಾಲೇಜು ಮುಖ್ಯಸ್ಥರ ಅನುಮತಿಯನ್ನು ಪಡೆದು ತೆರಳುವಂತೆ ಕ್ರಮಕೈಗೊಳ್ಳುವುದು.
  • ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಯಾವುದೇ ಒಂದು ಪ್ರದೇಶದಲ್ಲಿ ಸುಮಾರು 10 ರಿಂದ ಮೇಲ್ಪಟ್ಟು ಮಂದಿ ವ್ಯಾಕ್ಸಿನ್ ಪಡೆಯಲು ಬಾಕಿ ಇದ್ದಲ್ಲಿ, ಈ ಕುರಿತು ಪಾಲಿಕೆಗೆ ಮಾಹಿತಿ ನೀಡಿದ್ದಲ್ಲಿ ಪಾಲಿಕೆ ವತಿಯಿಂದಲೇ ಆ್ಯಂಬುಲೆನ್ಸ್ ಮುಖೇನ ವ್ಯಾಕ್ಸಿನ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
  • ಕೊರೊನಾಕ್ಕೆ ಸಂಬಂಧಿಸಿದಂತೆ ಯಾವುದೇ ಸಹಾಯ ಬೇಕಿದ್ದಲ್ಲಿ ಮಹಾನಗರಪಾಲಿಕೆ ಕೈಜೋಡಿಸುವುದೆಂದು ಸಭೆಯಲ್ಲಿ ತಿಳಿಸಿದರು.

ಸದ್ರಿ ಸಭೆಯಲ್ಲಿ ಮಹಾನಗರಪಾಲಿಕೆಯ ಉಪ ಆಯುಕ್ತರು ಆಡಳಿತ ಅಜಿತ್ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಕಿಶೋರ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ|| ಅಶೋಕ್, ಹಾಗೂ ಪಾಲಿಕೆಯ ಆರೋಗ್ಯಾಧಿಕಾರಿ ಡಾ|| ಮಂಜಯ್ಯ ಶೆಟ್ಟಿ ಹಾಗೂ ಪಾಲಿಕೆಯ ಕೋವಿಡ್ ಮತ್ತು ಮಲೇರಿಯಾ ನೋಡಲ್ ಅಧಿಕಾರಿ ಡಾ|| ಅಣ್ಣಯ್ಯ ಕುಲಾಲ್, ಡಿ.ಎಸ್.ಒ ಡಾ|| ಕೆ. ಜಗದೀಶ್ ಮತ್ತು ವಿವಿಧ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳ ಮತ್ತು ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು