News Karnataka Kannada
Saturday, May 04 2024
ಮಂಗಳೂರು

ಕ್ರಿಮಿನಲ್ ಪ್ರಕರಣ ಒಂದರಲ್ಲಿ ಬಾಂಬೆ ಪೊಲೀಸರಿಗೆ ಬೇಕಾಗಿದ್ದ ಆರೋಪಿಯ ಬಂಧನ

New Project (8)
Photo Credit :

ಮೂಡಬಿದ್ರೆ : ಕ್ರಿಮಿನಲ್ ಪ್ರಕರಣ ಒಂದರಲ್ಲಿ ಬಾಂಬೆ ಪೊಲೀಸರಿಗೆ ಬೇಕಾಗಿದ್ದ ಆರೋಪಿ ತಲೆಮರೆಸಿಕೊಂಡಿದ್ದ. ಈತ ಮೂಡಬಿದ್ರೆ ಪೊಲೀಸ್ ಠಾಣೆ ಸರಹದ್ದಿನ ಕೊಟೆಬಾಗಿಲು ನಿವಾಸಿ ಪ್ರವೀಣ್ ಕುಮಾರ್ (46 ವರ್ಷ) ಎಂಬಾತ.

ಇವನು ಭೂಗತ ಪಾತಕಿಗಳೊಂದಿಗೆ ನಂಟು ಹೊಂದಿರುವ ಹಾಗೂ ತನ್ನೊಂದಿಗೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಸಾದ್ಯತೆಗಳು ಇರುವ ಬಗ್ಗೆ ಮಾಹಿತಿ ಇದ್ದು , ಈ ದಿನ ಆತನು ತನ್ನ ಮನೆಗೆ ಬಂದಿರುವ ಮಾಹಿತಿ ತಿಳಿದು ಆತನನ್ನು ವಿಚಾರಣೆಗಾಗಿ ಠಾಣೆಗೆ ಕರೆತರುವ ಸಲುವಾಗಿ ಇಬ್ಬರು ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನೇಮಿಸಿ ಕಳುಹಿಸಿಕೊಟ್ಟಿದ್ದರು.

ಸಿಬ್ಬಂದಿಗಳು ಆರೋಪಿಯ ಮನೆಯ ಬಳಿ ಹೋದಾಗ ಸಮವಸ್ತ್ರ ದಲ್ಲಿದ್ದ ಸಿಬ್ಬಂದಿಗಳನ್ನು ನೋಡಿ ಆತನು ಓಡಿಹೋಗಲು ಪ್ರಯತ್ನ ಪಟ್ಟಿದ್ದು ಆಗ ಆತನನ್ನು ಹಿಡಿಯಲು ಹೋದಾಗ ಆರೋಪಿಯು ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ತಪ್ಪಿಸಿಕೊಳ್ಳುವ ಉದ್ದೇಶದಿಂದ ಪಿಸಿ 617 ರವರನ್ನು ಜೋರಾಗಿ ಕೈ ಯಿಂದ ತಳ್ಳಿ ನೆಲಕ್ಕೆ ಬೀಳಿಸಿ ನೋವುಂಟು ಮಾಡಿದ್ದ.

ನಂತರ ಸಿಬ್ಬಂದಿಗಳು ಆತನನ್ನು ಬೆನ್ನಟ್ಟಿ ಹಿಡಿದು ಠಾಣೆಗೆ ಕರೆತಂದರು. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆತನ ಮೇಲೆ ಪ್ರಕರಣವನ್ನು ದಾಖಲಿಸಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು