Categories: ಮಂಗಳೂರು

ಗಂಡ-ಹೆಂಡತಿ ವೈಮನಸ್ಸಿನ ಸಂದರ್ಭ ಮಧ್ಯಪ್ರವೇಶಿಸಿದ ಹಲ್ಲೆಯಾದ ವ್ಯಕ್ತಿ ಸಾವು

ಬಂಟ್ವಾಳ:ಕ್ಷುಲ್ಲಕ ಕಾರಣಕ್ಕಾಗಿ ಗಂಡ-ಹೆಂಡತಿ ವೈಮನಸ್ಸಿನ ಸಂದರ್ಭ ಮಧ್ಯಪ್ರವೇಶಿಸಿದ ಬಾವನಿಂದ ಹಲ್ಲೆಗೊಳಗಾದ ವ್ಯಕ್ತಿ ಸಾವನ್ನಪ್ಪಿದ್ದು, ಆರೋಪಿ ಬಾವನನ್ನು ಪೊಲೀಸರು ಬಂಧಿಸಿದ್ದಾರೆ

ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47)ಮೃತಪಟ್ಟವರಾಗಿದ್ದು, ಅವರ ಬಾವ  ಮಣಿನಾಲ್ಕೂರು ಗ್ರಾಮದ ಅಶೋಕ್ ಯಾನೆ ಚಂದಪ್ಪ (45) ಪೂಜಾರಿಗೆ ಬಂಧಿತ ಆರೋಪಿಯಾಗಿದ್ದಾನೆ.

ಕೇಶವ ಪೂಜಾರಿ ಮಂಗಳೂರಿನ ಹೊಟೇಲ್‌ನಲ್ಲಿ ಅಡಿಗೆ ಕೆಲಸ ಮಾಡುತ್ತಿದ್ದು,  ಕಳೆದ ಜ.೩೧ರಂದು ಮನೆಗೆ ಬಂದ ಅವರು ಸಂಬಳದ ಹಣವನ್ನು ಪತ್ನಿ ಪ್ರೇಮಾ ಅವರಲ್ಲಿ ನೀಡಿದ್ದಾರೆ. ಬಳಿಕ ನೂರು ರೂಪಾಯಿ ಕೇಳಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಪ್ರೇಮಾ ಅವರು ಈ ವಿಚಾರವನ್ನು  ತನ್ನ ಅಣ್ಣ ಅಶೋಕ್ ಯಾನೆ ಚಂದಪ್ಪ ಪೂಜಾರಿಗೆ ತಿಳಿಸಿದ್ದಾರೆ. ಮನೆಗೆ ಬಂದ ಅಶೋಕ್ ಯಾನೆ ಚಂದಪ್ಪ ಪೂಜಾರಿ ಕೇಶವ ಪೂಜಾರಿ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡಿದ್ದ ಕೇಶವ ಪೂಜಾರಿಗೆ ವಿಪರೀತ ಎದೆನೋವು ಕಾಣಿಸಿಕೊಂಡಿದೆ. ತತ್‌ಕ್ಷಣ ಅವರನ್ನು ತಾಯಿ ಲೀಲಾ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಔಷಧಿ ಪಡೆದು, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಕೇಶವ ಪೂಜಾರಿ ಅವರಿಗೆ ಫೆ.8ರಂದು  ತೀವ್ರ ಅನಾರೋಗ್ಯ ಕಾಣಿಸಿಕೊಂಡಿದೆ.ಮನೆಮಂದಿ   ಅವರನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ನೆರೆಹೊರೆಯವರು ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಪುಂಜಾಲಕಟ್ಟೆ ಪೊಲೀಸರಿಗೆ ಮಾಹಿತಿ ನೀಡಿ ಶವಪರೀಕ್ಷೆ ಮಾಡಿಸಲು ಸೂಚಿಸಿದ್ದಾರೆ. ಅದರಂತೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮೃತದೇಹದ ಶವಪರೀಕ್ಷೆ ಮಾಡಿಸಿದಾಗ ಹಲ್ಲೆಯಿಂದ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂಬುವುದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡ ಸಿಐ ಶಿವಕುಮಾರ್ ಮತ್ತು ತಂಡ ಆರೋಪಿಯನ್ನು ಫೆ.೨೧ರಂದು ಮಂಗಳೂರಿನ ಬಜಪೆ ವ್ಯಾಪ್ತಿಯ ಹೊಟೇಲ್‌ನಲ್ಲಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ
Swathi MG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

39 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

57 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

1 hour ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago