Categories: ಮಂಗಳೂರು

ಗಾಂಧಿ ಚಿಂತನೆಗೆ ವಿರುದ್ದವಾಗಿ ಕೋಮುವಾದಿ ಧ್ರುವೀಕರಣ; ರಾಘವ ಕೆ

ದೇಶದ ಸ್ವಾತಂತ್ರ್ಯ ಚಳುವಳಿಗೆ ಅಪಾರ ಕೊಡುಗೆ ನೀಡಿದ ಮಹಾತ್ಮ ಗಾಂಧಿಯವರ ಚಿಂತನೆಗಳು ಪ್ರಸ್ತುತ ದೇಶಕ್ಕೆ ಭಾರೀ ಅಗತ್ಯವಿದೆ. ವಿಪರ್ಯಾಸವೆಂದರೆ ಸ್ವಾತಂತ್ರ್ಯ ಚಳುವಳಿಯಲ್ಲಿ ಎಳ್ಳಷ್ಟೂ ಭಾಗವಹಿಸದವರು ಇಂದು ದೇಶವನ್ನು ಆಳುತ್ತಿರುವುದು ದುರಂತವಾಗಿದೆ. ಮಾತ್ರವಲ್ಲದೆ ಸ್ವಾತಂತ್ರ್ಯದ ಆಶಯಗಳನ್ನು ಮಣ್ಣುಪಾಲು ಮಾಡಿ ಮತ್ತೆ ಧರ್ಮದ ಆಧಾರದಲ್ಲಿ ದೇಶ ವಿಭಜನೆಯ ಹುನ್ನಾರ ನಡೆಸುತ್ತಿರುವ ಕೋಮುವಾದಿ ಶಕ್ತಿಗಳು ವ್ಯವಸ್ಥಿತ ರೀತಿಯಲ್ಲಿ ಗಾಂಧೀಜಿಯವರ ಚಿಂತನೆಗಳ ವಿರುದ್ದ ಕೋಮುವಾದಿ ಧ್ರುವೀಕರಣಗೊಳಿಸಿ ಗಾಂಧಿ ಹತ್ಯೆಯನ್ನು ಸಮರ್ಥಿಸುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ರಾಜ್ಯಾಧ್ಯಕ್ಷರಾದ ರಾಘವ ಕೆ.ಯವರು ಅಭಿಪ್ರಾಯ ಪಟ್ಟರು.

ಅವರು ಮಹಾತ್ಮ ಗಾಂಧಿಯವರ 74ನೇ ಹುತಾತ್ಮ ದಿನಾಚರಣೆಯ ಅಂಗವಾಗಿ ತಾ. 30-01-2022ರಂದು ನಗರದ ವಿಕಾಸ ಕಚೇರಿಯಲ್ಲಿ ಅಯೋಜಿಸಿದ ಸೌಹಾರ್ದ ಭಾರತಕ್ಕೆ ಎದುರಾಗಿರುವ ಸವಾಲುಗಳು ಎಂಬ ಸಂವಾದ ಕಾರ್ಯಕ್ರಮದಲ್ಲಿ ವಿಷಯ ಮಂಡಿಸುತ್ತಾ ಈ ಮಾತುಗಳನ್ನು ಹೇಳಿದರು.

CPIM ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ. ಕೃಷ್ಣಪ್ಪ ಕೊಂಚಾಡಿಯವರು ಮಾತನಾಡುತ್ತಾ, ಗಾಂಧೀಜಿಯವರ ವ್ಯಕ್ತಿತ್ವ ಹಾಗೂ ಚಿಂತನೆಗಳು ಜಗತ್ತಿನಾದ್ಯಂತ ಪ್ರಭಾವಿಸಿದೆ. ದೇಶದ ಐಕ್ಯತೆ ಮತ್ತು ಸೌಹಾರ್ದತೆಗಾಗಿ ಅವಿಶ್ರಾಂತವಾಗಿ ಶ್ರಮಿಸಿದ ಗಾಂಧಿಯವರ ಚಿಂತನೆಗಳನ್ನು ಇಡೀ ದೇಶವೇ ಮೈಗೂಡಿಸಬೇಕಾಗಿದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ CPIM ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನೀರ್ ಕಾಟಿಪಳ್ಳರವರು ಮಾತನಾಡುತ್ತಾ ಸೌಹಾರ್ದ ಭಾರತದ ನಿರ್ಮಾಣದಲ್ಲಿ ಕೋಮುವಾದಿ ಶಕ್ತಿಗಳು ತೊಡಕಾಗಿದ್ದು, ಕೋಮು ವಿಷಬೀಜವನ್ನು ಬಿತ್ತಿ ಮತ್ತೆ ದೇಶ ಒಡೆಯಲು ಹುನ್ನಾರ ನಡೆಸುತ್ತಿದೆ. ಇಂತಹ ಕಠಿಣ ಸವಾಲನ್ನು ಎದುರಿಸಿ ದೇಶವನ್ನು ಉಳಿಸಲು ಎಲ್ಲಾ ಜಾತ್ಯಾತೀತ ಪ್ರಗತಿಪರ ಪ್ರಜಾಪ್ರಭುತ್ವವಾದಿ ಶಕ್ತಿಗಳು ಒಂದಾಗಬೇಕಾದ ಅನಿವಾರ್ಯತೆ ಸೃಷ್ಠಿಯಾಗಿದೆ ಎಂದು ಹೇಳಿದರು.

ಪ್ರಾರಂಭದಲ್ಲಿ ಸುನಿಲ್ ಕುಮಾರ್ ಬಜಾಲ್ ರವರು ಸ್ವಾಗತಿಸಿದರೆ, ಕೊನೆಯಲ್ಲಿ ಬಶೀರ್ ಪಂಜಿಮೊಗರು ರವರು ವಂದಿಸಿದರು.

Gayathri SG

Recent Posts

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

14 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

1 hour ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

3 hours ago