ಮಂಗಳೂರು

ಗುರುವಾಯನಕೆರೆಯಲ್ಲಿ ಭಾನುವಾರ ಮಧ್ಯಾಹ್ನ ಟ್ರಾಫಿಕ್ ಜಾಮ್‌

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಭಾನುವಾರ ಮಧ್ಯಾಹ್ನ ಟ್ರಾಫಿಕ್ ಜಾಮ್‌ ಆಗಿ ವಾಹನ ಚಾಲಕರು ಪರದಾಡುವಂತಾಯಿತು. ಗುರುವಾಯನಕೆರೆ ಪೇಟೆಯಲ್ಲಿ ಟ್ರಾಫಿಕ್ ಜಾಂ ಆಗಿ ಬೆಳ್ತಂಗಡಿಯವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಬೆಳ್ತಂಗಡಿಯಂದ ಗುರುವಾಯನಕೆರೆ ವರೆಗಿನ 3 ಕಿ.ಮೀ. ತಲುಪಲು ಒಂದು ಗಂಟೆಗೂ ಹೆಚ್ಚುಸಮಯ ಬೇಕಾಯಿತು. ನಿರಂತರ ಮಳೆಯೂ ಸುರಿಯುತ್ತಿದ್ದ ಕಾರಣ ವಾಹನ ಸವಾರರು ಇನ್ನಷ್ಟು ಸಮಸ್ಯೆ ಎದುರಿಸುವಂತಾಯಿತು.

ಗುರುವಾಯನಕೆರೆಯಲ್ಲಂತೂ ಸಂಪೂರ್ಣ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು. ಇಲ್ಲಿ ಅತ್ಯಂತ ಕಿರಿದಾದ ರಸ್ತೆಯಿದ್ದು ಭಾನುವಾರ ಕಾರ್ಯಕ್ರಮಗಳು ಹೆಚ್ಚಾಗಿದ್ದು ವಾಹನದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಜಾಮಿಗೆ ಕಾರಣವಾಯಿತು.

ಟ್ರಾಫಿಕ್ ಜಾಮ್ ನಡುವೆ ಗುರುವಾಯನಕೆರೆಯಲ್ಲಿ ರೋಗಿಯೊಂದಿಗೆ ಬರುತ್ತಿದ್ದ ಆಂಬುಲೆನ್ಸ್ ಒಂದು ಸಿಲುಕಿಕೊಂಡಿದ್ದು ಟ್ರಾಫಿಕ್ ನಿಂದ ಹೊರಬರಲು ಪರದಾಡುವಂತಾಯಿತು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago