Categories: ಮಂಗಳೂರು

ಗೋ ಆರಾಧನೆ ಮತ್ತು ಗುರುವಂದನೆ, ವಿಕಲಚೇತನರಿಗೆ ವೀಲ್ ಚೇರ್ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಗೋವಿನ ಆರಾಧನೆಯ ಹಿಂದೆ ವಿಶೇಷ ಪುಣ್ಯವಿದ್ದು, ಜಾಗೃತ ಸಮಾಜ ಗೋವಿನ ಕುರಿತು ಎಚ್ಚೆತ್ತುಕೊಳ್ಳುವುದು ಅತಿ ಅಗತ್ಯವಾಗಿದೆ. ನಾವು ಹೆತ್ತವರಿಗೆ ನೋವು ಕೊಡದೇ ಇರುವುದು ನಿಜವಾದ ಜೀವನವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಷಷ್ಠ್ಯಬ್ದ ಮಹೋತ್ಸವ ಸಮಿತಿ ಬಂಟ್ವಾಳದ ಆಶ್ರಯದಲ್ಲಿ ನಡೆದ ಗೋ ಆರಾಧನೆ ಮತ್ತು ಗುರುವಂದನೆ, ವಿಕಲಚೇತನರಿಗೆ ವೀಲ್ ಚೇರ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಒಡಿಯೂರು ಕ್ಷೇತ್ರದ ಸಾಧ್ವಿ ಮಾತಾನಂದಮಯೀ ಅವರು ಆಶೀರ್ವಚನ ನೀಡಿದರು.  ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಗೋವನ್ನು ಸಾಕುವವರು ಕೇವಲ ಹಾಲಿನ ಲೆಕ್ಕಾಚಾರ ಹಾಕದೆ ಅದರ ಗೊಬ್ಬರವೂ ಲಾಭದ ಭಾಗವಾಗಿದೆ ಎಂದು ಲೆಕ್ಕಾಚಾರ ಹಾಕಬೇಕಿದೆ. ಸ್ವಾಮೀಜಿಯವರು ನಾಡಿಗೆ ವಿಶೇಷ ಕೊಡುಗೆಯನ್ನು ನೀಡಿದ್ದು, ಅವರ ೧೦೦ನೇ ಹುಟ್ಟು ಹಬ್ಬದ ಸಂಭ್ರಮವನ್ನೂ ಬಂಟ್ವಾಳದ ಜನತೆ ಆಚರಿಸುವಂತಾಗಲಿ ಎಂದರು.

ನಿವೃತ್ತ ಪ್ರಾಧ್ಯಾಪಕ ಸೋಂದೆ ಡಾ.ಭಾಸ್ಕರ ಭಟ್ ಕಟೀಲು ಅವರು ಮಾತನಾಡಿ, ಇಡೀ ಜಗತ್ತಿನಲ್ಲೇ ಗೋವು ವಿಶೇಷ ಸ್ಥಾನವನ್ನು ಪಡೆದುಕೊಂಡಿದ್ದು, ನಾವು ಗೋವನ್ನು ಆರಾಧಿಸಿದರೆ ಎಲ್ಲಾ ದೇವರನ್ನೂ ಆರಾಧಿಸುವುದಕ್ಕೆ ಸಮನಾಗುತ್ತದೆ ಎಂದರು. ಬಂಟ್ವಾಳ ಸಮಿತಿಯ ಕಾರ್ಯಾಧ್ಯಕ್ಷ ಪ್ರೊ.ತುಕರಾಮ್ ಪೂಜಾರಿ ಅವರು ಪ್ರಸ್ತಾವನೆಗೈದರು. ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ಅವರು ಅಭಿನಂದನಾ ಭಾಷಣ ಮಾಡಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಸಮಿತಿಯ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್ ವೇದಿಕೆಯಲ್ಲಿದ್ದರು.ಷಷ್ಠ್ಯಬ್ದ ಮಹೋತ್ಸವ ಸಮಿತಿಯ ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿದರು. ಎಚ್.ಕೆ.ನಯನಾಡು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಶ್ರೀ ರಕ್ತೇಶ್ವರೀ ಸನ್ನಿಧಿಯಿಂದ ಮೆರವಣಿಗೆ ನಡೆಯಿತು.

Sneha Gowda

Recent Posts

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

1 min ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

39 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

42 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

56 mins ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

56 mins ago

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

1 hour ago