ಮಂಗಳೂರು : ಘಾನಾದಿಂದ ಮಂಗಳೂರಿಗೆ ಆಗಮಿಸಿದ 27 ವರ್ಷದ ಯುವಕನಿಗೆ ಒಮಿಕ್ರಾನ್ ಸೋಂಕು ಕಂಡು ಬಂದಿದೆ. ಯುವಕ ಘಾನಾದಿಂದ ದುಬೈ ಮೂಲಕ ಡಿ.16ರಂದು ಮಂಗಳೂರಿಗೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಪಡಿಸಲಾಗಿತ್ತು.
ವರದಿ ಪಾಸಿಟಿವ್ ಬಂದಿದ್ದು, ಆತಯಲ್ಲಿ ಒಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. ಯುವಕನ ಪ್ರಾಥಮಿಕ ಸಂಪರ್ಕದಲ್ಲಿದ್ದ 17 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಗುರುವಾರ ಒಟ್ಟು 12 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ ಒಟ್ಟು 31 ಒಮಿಕ್ರಾನ್ ಪ್ರಕರಣಗಳು ಪತ್ತೆಯಾದಂತಾಗಿದೆ.