ಬಂಟ್ವಾಳ: ವ್ಯಕ್ತಿಯೋರ್ವರ ಮೃತದೇಹ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಚಂದಳಿಕೆಯ ಕಾಂತಾಮೂಲೆ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಾಂತಾಮೂಲೆ ನಿವಾಸಿ ದಿನೇಶ್(45) ಎಂದು ಗುರುತಿಸಲಾಗಿದೆ.ದಿನೇಶ್ ರವರ ಮೃತದೇಹವು ಅವರ ಮನೆಯ ರೂಮ್ ನಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಿನೇಶ್ ಮತ್ತು ಆತನ ತಂದೆ ವಸಂತ ಗೌಡ ಇಬ್ಬರೇ ಮನೆಯಲ್ಲಿ ವಾಸವಿದ್ದು,ಆತನ ತಂದೆಯೇ ಕೊಲೆಗೈದಿರಬಹುದೆಂಬ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಕುಡಿದು ಗಲಾಟೆ ಮಾಡಿ ಬಳಿಕ ತಂದೆ ಮಗನ ತಲೆಗೆ ಒಡೆದ ಪರಿಣಾಮ ರಕ್ತಸ್ರಾವ ವಾಗಿ ಮನೆಯಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಮನೆಯಲ್ಲಿ ತಂದೆ ಮಗ ಇಬ್ಬರೇ ವಾಸಮಾಡಿಕೊಂಡಿದ್ದು, ಇಬ್ಬರು ಕೂಲಿ ಕೆಲಸ ಮಾಡುತ್ತಿದ್ದರು.ಇಬ್ಬರಿಗೂ ಕುಡಿತದ ಚಟ ಇದ್ದು, ಕುಡಿದ ಮತ್ತಿನಲ್ಲಿ ಗಲಾಟೆ ನಡೆದು ಕೊಲೆ ಯಾಗಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.