Categories: ಮಂಗಳೂರು

ಚಲಿಸುತ್ತಿದ್ದ ಕಾರಿಗೆ ಬೆಂಕಿ, ಪ್ರಯಾಣಿಕರು ಪಾರು

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸಿ ಕಾರಿನ ಮುಂಭಾಗ ಭಾಗಶಃ ಸುಟ್ಟು ಹೋದ ಘಟನೆ ಬುಧವಾರ ಮಧ್ಯಾಹ್ನ ಪಿವಿಎಸ್‌ ವೃತ್ತದ ಬಳಿ ಸಂಭವಿಸಿದೆ.

ಪಿವಿಎಸ್‌ ವೃತ್ತದ ಕಡೆಯಿಂದ ನವಭಾರತ ವೃತ್ತ ಕಡೆಗೆ ಹೋಗುತ್ತಿದ್ದ ಕಾರಿನ ಮುಂಭಾಗದಲ್ಲಿ ಹೊಗೆ ಕಂಡ ಚಾಲಕ ಕೂಡಲೇ ಕಾರು ನಿಲ್ಲಿಸಿದರು.

ಬಳಿಕ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದರು. ಕಾರಿನ ಮುಂಭಾಗ ಭಾಗಶಃ ಸುಟ್ಟು ಹೋಗಿದೆ. ಬ್ಯಾಟರಿ ಬಳಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಉಂಟಾಗಿರಬಹುದೆಂದು ಶಂಕಿಸಲಾಗಿದೆ.

ಘಟನೆ ವೇಳೆ ಕಾರಿನಲ್ಲಿ ಚಾಲಕ ಸಹಿತ ಇಬ್ಬರಿದ್ದರು ಎಂದು ತಿಳಿದುಬಂದಿದೆ.

Ashika S

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

4 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

4 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

4 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

4 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

4 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

5 hours ago