Categories: ಮಂಗಳೂರು

ಚಾರ್ಮಾಡಿ ಕಣಿವೆ ರಸ್ತೆಯಲ್ಲಿದ್ದ ಸಂಚಾರ ನಿರ್ಬಂಧ ತೆರವು

ಬೆಳ್ತಂಗಡಿ: ಗುಡ್ಡ ಕುಸಿತದಿಂದಾಗಿ ದೊಡ್ಡ ವಾಹನಗಳಿಗೆ ಚಾರ್ಮಾಡಿ ಕಣಿವೆ ರಸ್ತೆಯಲ್ಲಿದ್ದ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲಾಗಿದೆ

ಇಲ್ಲಿ ಸಂಜೆ 7ರ ಬಳಿಕ ಬೆಳಿಗ್ಗೆ 6 ಗಂಟೆ ತನಕ ಹೇರಲಾಗಿದ್ದ ವಾಹನ ಸಂಚಾರ ನಿರ್ಬಂಧವನ್ನು ಸಡಿಲ ಗೊಳಿಸಿ,ಲಘು ವಾಹನಗಳಿಗೆ ದಿನಪೂರ್ತಿ ಸಂಚಾರ ಅವಕಾಶವನ್ನು ಕಲ್ಪಿಸಲಾಗಿದೆ.

ಜು.23ರಂದು ಚಾರ್ಮಾಡಿ ಘಾಟಿಯ 6ನೇ ತಿರುವಿನಲ್ಲಿ ಗುಡ್ಡ ಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಅಪಾಯ ಎದುರಾಗಿತ್ತು.ಈ ಕಾರಣದಿಂದ ರಾತ್ರಿ ವಾಹನ ಸಂಚಾರಕ್ಕೆ ದಕ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ನಿರ್ಬಂಧ ಹೇರುವ ಆದೇಶ ಹೊರಡಿಸಿದ್ದರು. ಇದರಿಂದ ಘಾಟಿ ಪ್ರದೇಶದಲ್ಲಿ ರಾತ್ರಿ ವಾಹನಗಳ ಸಂಚಾರ ಇರಲಿಲ್ಲ.

ಗುಡ್ಡ ಕುಸಿತ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ಇನ್ನಷ್ಟು ಕುಸಿತ ಉಂಟಾಗದಂತೆ ಮತ್ತು ಕುಸಿತಗೊಂಡ ಸ್ಥಳದಲ್ಲಿ ಮರಳಿನ ಚೀಲಗಳನ್ನು ಅಳವಡಿಸಿ ಹೆಚ್ಚಿನ ಹಾನಿ ಉಂಟಾಗದಂತೆ ತಕ್ಷಣ ಕಾಮಗಾರಿ ನೆರವೇರಿಸಲಾಗಿತ್ತು. ಆದರೆ ಘಾಟಿ ಪ್ರದೇಶದಲ್ಲಿ ವಿಪರೀತ ಮಳೆಯಿದ್ದ ಕಾರಣ ನಿರ್ಬಂಧ ಮುಂದುವರಿದಿತ್ತು

ಘಾಟಿ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ ಇದ್ದರೆ ಪ್ರಯಾಣಿಕರು ಹೆಚ್ಚು ಸಮಸ್ಯೆಯನ್ನು ಎದುರಿಸುತ್ತಾರೆ ಎಂಬ ಕಾರಣದಿಂದ ಶಾಸಕ ಹರೀಶ್ ಪೂಂಜ, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಎಂ ಎಲ್ ಸಿ ಪ್ರತಾಪಸಿಂಹ ನಾಯಕ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ನಿರ್ಬಂಧ ತೆರವುಗೊಳಿಸುವಂತೆ ಧ್ವನಿ ಎತ್ತಿದ್ದರು.
ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆ.12ರಂದು ನೂತನ ಆದೇಶ ಹೊರಡಿಸಿದ್ದು ಟೆಂಪೋ ಟ್ರಾವೆಲರ್, ಆಂಬುಲೆನ್ಸ್, ಕಾರು, ಜೀಪು,ಮಿನಿವ್ಯಾನ್ ಹಾಗೂ ಇನ್ನಿತರ ಲಘು ವಾಹನಗಳು ಘಾಟಿಯಲ್ಲಿ ದಿನಪೂರ್ತಿ ಸಂಚರಿಸಲು ಅವಕಾಶ ನೀಡಿದ್ದಾರೆ.

ಘನ ವಾಹನಗಳಾದ ಕೆಂಪು ಬಸ್, ಆರು ಚಕ್ರದ ಲಾರಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 7 ಗಂಟೆ ತನಕ ಮಾತ್ರ ಸಂಚಾರ ಅವಕಾಶ ಇರುತ್ತದೆ. ಬುಲೆಟ್ ಟ್ಯಾಂಕರ್,ರಾಜಹಂಸ, ಶಿಪ್ ಕಾರ್ಗೋ ಹಾಗೂ ಇನ್ನಿತರ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ ಮುಂದುವರಿದಿದೆ.

ಚಾರ್ಮಾಡಿ ಮೂಲಕ ದಿನಪೂರ್ತಿ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿರುವುದರಿಂದ ಚಾರ್ಮಾಡಿ, ಕೊಟ್ಟಿಗೆಹಾರ ಭಾಗದ ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಿದೆ. ಚಾರ್ಮಾಡಿ ಹಾಗೂ ಕೊಟ್ಟಿಗೆಹಾರಗಳ ವರ್ತಕರು ನಿಟ್ಟುಸಿರು ಬಿಡುವಂತಾಗಿದೆ. ಆಸ್ಪತ್ರೆಗಳಿಗೆ ತೆರಳುವ ಮಂದಿಗೆ ನಿರ್ಬಂಧ ತೆರವುಗೊಳಿಸಿರುವುದು ಸಹಕಾರಿಯಾಗಿದೆ.

 

Sampriya YK

Recent Posts

ಪೈಲಟ್‌ಗಳ ಸಾಮೂಹಿಕ ರಜೆ : 70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್‌ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌…

12 mins ago

ಪ್ರಿಯತಮೆ ಎದುರೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಂದ ಪಾಪಿ!

ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…

38 mins ago

ಬೂತ್​ನಲ್ಲಿ ಲಕ್ಕಿ ಡ್ರಾ : ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ

ಭೋಪಾಲ್​ನ ಪ್ರತಿ ಬೂತ್​ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…

54 mins ago

ಹೊಸ ಕೋವಿಡ್-19 ರೂಪಾಂತರ ಯುಎಸ್‌ನಲ್ಲಿ ಪತ್ತೆ!

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…

1 hour ago

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ.…

1 hour ago

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…

2 hours ago