News Karnataka Kannada
Friday, May 03 2024
ಮಂಗಳೂರು

ಚಾರ್ಮಾಡಿ ಘಾಟಿ ಆರಂಭ ಭಾಗದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ಡಿಕ್ಕಿ

Accident
Photo Credit :

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಘಾಟಿ ಆರಂಭ ಭಾಗದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ಮೂಡಿಗೆರೆ ಕಡೆಯಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಬಸ್ಸು ಹಾಗೂ ಉಜಿರೆ ಕಡೆಯಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಪ್ರವಾಸಿ ಕಾರು ಅಪಘಾತಕ್ಕೀಡಾಗಿವೆ.

ಕಾರಿನಲ್ಲಿ ಐವರು ಇದ್ದು ಇಬ್ಬರು ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಸಮಯದಲ್ಲಿ ಮಳೆಯು ಬರುತ್ತಿದ್ದು, ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಅಪಘಾತದಿಂದ ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆಯು ಉಂಟಾಯಿತು. ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು