Categories: ಮಂಗಳೂರು

ಚಾರ್ಮಾಡಿ ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷ

ಬೆಳ್ತಂಗಡಿ: ಚಾರ್ಮಾಡಿ ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಕೃಷಿ ಹಾನಿಯನ್ನು ಉಂಟು ಮಾಡಿವೆ.
ಚಾರ್ಮಾಡಿಯ ಮಠದ ಮಜಲು ಅನಂತ ರಾವ್ ಅವರ ಕೃಷಿ ತೋಟಕ್ಕೆ ದಾಳಿ ನಡೆಸಿದ ಕಾಡಾನೆಗಳು 7 ತೆಂಗಿನ ಮರ, ಹತ್ತಾರು ಅಡಕೆ ಹಾಗೂ ಬಾಳೆ ಗಿಡಗಳನ್ನು ನೆಲಸಮ ಮಾಡಿವೆ.

ಗುಂಪಿನಲ್ಲಿ ನಾಲ್ಕೈದು ಆನೆಗಳು ಇರುವ ಶಂಕೆ ವ್ಯಕ್ತವಾಗಿದೆ.ಇವರ ಕೃಷಿ ತೋಟಕ್ಕೆ ಕಳೆದ ಕೆಲವು ತಿಂಗಳುಗಳಿಂದ ಆಗಾಗ ಕಾಡಾನೆಗಳು ಕಾಟ ನೀಡುತ್ತಿವೆ. ಚಿಬಿದ್ರೆ ಭಾಗದಲ್ಲು ಅಲ್ಲಲ್ಲಿ ಕಾಡಾನೆಗಳು ತಿರುಗಾಟ ನಡೆಸಿರುವ ಕುರಿತು ಮಾಹಿತಿ ಇದೆ.

ಮುಂಡಾಜೆಯ ದುಂಬೆಟ್ಟು ಪರಿಸರದಲ್ಲಿ ಸುಮಾರು ಎರಡು ತಿಂಗಳ ಹಿಂದೆ ನಿರಂತರ 18 ದಿನ ಕಾಡಾನೆಗಳು ದಾಳಿ ನಡೆಸಿ ಕೃಷಿ ಹಾನಿ ಉಂಟು ಮಾಡಿದ್ದವು. ಬಳಿಕ ಈ ಭಾಗದಲ್ಲಿ ಕಾಡಾನೆಗಳು ಕಂಡುಬಂದಿರಲಿಲ್ಲ.

ಕಳೆದ ಹತ್ತು ದಿನಗಳ ಹಿಂದೆ ದಿಡುಪೆ ಪರಿಸರದಲ್ಲಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿ ಉಂಟುಮಾಡಿದ್ದವು. ಈಗ ಮತ್ತೆ ಈ ಭಾಗಕ್ಕೆ ಕಾಡಾನೆಗಳು ಕಂಡು ಬಂದಿರುವುದು ಸ್ಥಳೀಯ ಕೃಷಿಕರ ಆತಂಕವನ್ನು ಹೆಚ್ಚಿಸಿದೆ.

ಶಿರಾಡಿ ಘಾಟಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಈ ಭಾಗದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಕಾಡಾನೆ ಕಂಡುಬಂದಿತ್ತು.
ಈ ಕಾಡಾನೆ ಮತ್ತೆ ತನ್ನ ಗುಂಪಿನ ಸಹಿತ ಚಾರ್ಮಾಡಿ ಕಡೆ ಕಾಲಿಟ್ಟಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಆನೆ ದಾಳಿಯಿಂದ ಬೇಸತ್ತ ಕೃಷಿಕರು ಇತ್ತೀಚಿನ ದಿನಗಳಲ್ಲಿ ಇಲಾಖೆಗೆ ಮಾಹಿತಿ ನೀಡುತ್ತಿಲ್ಲ.ಮಾಹಿತಿ ನೀಡಿದರೂ ಯಾವುದೇ ರೀತಿಯ ಪರಿಹಾರವಾಗಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಕೈಗೊಳ್ಳದಿರುವುದು ಇದಕ್ಕೆ ಕಾರಣವಾಗಿದೆ.

Sneha Gowda

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

39 mins ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

50 mins ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

57 mins ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

2 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

2 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

2 hours ago