Categories: ಮಂಗಳೂರು

ಚುನಾಯಿತ ಪ್ರತಿನಿಧಿಗಳ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿದ ಮಂಜುನಾಥ ಭಂಡಾರಿ

ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿಯವರು ಇಂದು ನಡೆದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ನಿಯಮ 330ರ ಅಡಿಯಲ್ಲಿ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿರು. ಅಧಿವೇಶನದಲ್ಲಿ ಮಾತನಾಡಿದ ಅವರು ‘ಪ್ರಜಾ ಪ್ರಭುತ್ವದಲ್ಲಿ ಗ್ರಾಮ ಪಂಚಾಯತಿಯೇ ತಳಹದಿ. ಆ ತಳಹದಿಯನ್ನು ನಾವು ಬಲಿಷ್ಠವಾಗಿಸಿದರೆ ಮಾತ್ರ ಮಾಹಾತ್ಮ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕನಸು ನನಸಾಗುವುದು. ಆದರೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ಪ್ರಕಾರ ಶೇಕಡ 50 ರಷ್ಟು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿ ಬರುವುದರಿಂದ ಗೌರವಾನ್ವಿತವಾಗಿ ಬದುಕಲು ಮತ್ತು ಬಡಜನರ ಕಷ್ಟ-ಸುಖಗಳಿಗೆ ಸ್ಪಂದಿಸಲು ಚುನಾಯಿತ ಪ್ರತಿನಿಧಿಗಳೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ.

ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಕನಿಷ್ಠ ಪಕ್ಷ ಮಾಸಿಕ 10 ಸಾವಿರ ರೂಪಾಯಿಗಳವರೆಗೆ ಹೆಚ್ಚಿಸಬೇಕೆಂದು ಅಲ್ಲದೇ ಚುನಾಯಿತ ಪ್ರತಿನಿಧಿಗಳಿಗೆ ವೈದ್ಯಕೀಯ ಸೌಲಭ್ಯ ಮತ್ತು ಆ ಜಿಲ್ಲೆಗಳಲ್ಲಿ ಓಡಾಡಲು ಉಚಿತ ಬಸ್ ಸೌಕರ್ಯವನ್ನು ಹಾಗೂ 5 ವರ್ಷಗಳನ್ನು ಪೂರ್ಣ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಪಿಂಚಣಿಯನ್ನು ಕೊಡಬೇಕೆಂದು ಆಗ್ರಹಿಸಿದರು.

“ನಾನು ನನ್ನ ಡಾಕ್ಟರೇಟ್ ಪದವಿಯನ್ನು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಭ್ಯಾಸ ಮಾಡಿರುತ್ತೇನೆ, ನನ್ನ ಡಾಕ್ಟರೇಟಿನ ಪ್ರಬಂಧ ಮಾಡಲು ಮಾಹಿತಿ ಕಲೆ ಹಾಕುವಾಗ ಸಾವಿರಾರು ಗ್ರಾಮ ಪಂಚಾಯತ್ ಸದಸ್ಯರುಗಳನ್ನು ವಯಕ್ತಿಕವಾಗಿ ಭೇಟಿ ಮಾಡಿ ಅವರು ಪಡುತ್ತಿರುವ ಕಷ್ಟಗಳನ್ನು ಕಣ್ಣಾರೆ ನೋಡಿರುತ್ತೇನೆ” ಎಂದು ಮಂಜುನಾಥ ಭಂಡಾರಿಯವರು ಹೇಳಿದರು. ಇದನ್ನು ಗೌರವಾನ್ವಿತ ಗ್ರಾಮಿಣಾಭಿವೃದ್ಧಿ ಸಚಿವರು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಅನುಷ್ಟಾನಗೊಳಿಸಬೇಕೆಂದು ಹಾಗೂ ಇದಕ್ಕೆ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದ ಎಲ್ಲಾ 25 ಸದಸ್ಯರ ಒಕ್ಕೊರಳಿನ ಬೆಂಬಲ ಇದೆಯೆಂದು ತಿಳಿಸಿದರು.

Gayathri SG

Recent Posts

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

9 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

13 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

24 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

55 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

2 hours ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

2 hours ago