ಮಂಗಳೂರು

ಜನರಿಗೆ ಸಿಗಬೇಕಾದ ಸವಲತ್ತುಗಳಲ್ಲಿ ಬಿಜೆಪಿ ಪಕ್ಷದ ಸದಸ್ಯರು ರಾಜಕೀಯ ಮಾಡುತ್ತಿದ್ದಾರೆ : ಜಿಲ್ಲಾಅಧ್ಯಕ್ಷ ಹರೀಶ್ ಕುಮಾರ್

ಮಂಗಳೂರು : ಸರ್ಕಾರದಿಂದ ಜನರಿಗೆ ಸಿಗಬೇಕಾದ ಸವಲತ್ತುಗಳಲ್ಲಿ ಬಿಜೆಪಿ ಪಕ್ಷದ ಸದಸ್ಯರು ರಾಜಕೀಯ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದಾರೆ.‌
ಮಂಗಳೂರಿನ ‌ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನೀಡಲ್ಪಡುವ ಲಸಿಕೆ ಹಂಚಿಕೆ, ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಿಂದ ನೀಡಲಾಗುವ ಆಹಾರ ಪೊಟ್ಟಣಗಳನ್ನು ವಿತರಿಸುವ ಕಾರ್ಯವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುತ್ತಿದೆ ಎಂದು ಆಪಾದಿಸಿದರು.
ಇನ್ನು ಕೆಎಸ್ ಆರ್ ಟಿಸಿ ಬಸ್ಸನ್ನು ಐಸಿಯು ಆಗಿ ಪರಿವರ್ತಿಸಿ ಗ್ರಾಮೀಣ ಭಾಗದಲ್ಲಿ ಜನರ ಆರೋಗ್ಯ ತಪಾಸಣೆ ಕಾರ್ಯದಲ್ಲೂ ಇದೇ ರೀತಿ ರಾಜಕೀಯ ನಡೆಯುತ್ತಿದೆ. ಈ ಬಗ್ಗೆ ಕ್ರಮ ವಹಿಸಬೇಕಾದ ಅಧಿಕಾರಿಗಳು ಕೂಡಾ ಬಿಜೆಪಿಯ ಕೈಗೊಂಬೆಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹರೀಶ್ ಕುಮಾರ್ ಆಪಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಾಹುಲ್ ಹಮೀದ್, ಅಬ್ಬಾಸ್, ಲಾರೆನ್ಸ್ ಡಿಸೋಜಾ, ಸುಧೀರ್ ಟಿ.ಕೆ., ನೀರಜ್ ಪಾಲ್ ಮೊದಲಾದವರು ಉಪಸ್ಥಿತರಿದ್ದರು.
Raksha Deshpande

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago