Categories: ಮಂಗಳೂರು

ಜೀವನ, ಸಂಪತ್ತು ಎಲ್ಲಾ ಕ್ಷಣಿಕವಾಗಿದ್ದು ಐಸ್‌ಕ್ರೀಂ ನಂತೆ ಕರಗಿ ಹೋಗುತ್ತದೆ : ಪೂಜ್ಯ ಅಮೋಘಕೀರ್ತಿ ಮುನಿಮಹಾರಾಜರು

ಬೆಳ್ತಂಗಡಿ: ದೇವರು, ಗುರುಗಳು ಮತ್ತು ಶಾಸ್ತçದಲ್ಲಿ ದೃಢ ನಂಬಿಕೆ ಇಟ್ಟು ಮನ, ವಚನ, ಕಾಯದಿಂದ ತ್ರಿಕರಣ ಪೂರ್ವಕವಾಗಿ ದಾನ, ಧರ್ಮ ಮತ್ತು ಸೇವೆಯ ಸತ್ಕಾರ್ಯ ಮಾಡಿ ಪುಣ್ಯ ಸಂಚಯ ಮಾಡಿಕೊಳ್ಳಬೇಕು. ಜಪ, ತಪ, ಧ್ಯಾನ, ಸ್ವಾಧ್ಯಾಯದ ಮೂಲಕ ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಮೋಕ್ಷ ಪ್ರಾಪ್ತಿಯಾಗಿ ಆತ್ಮನೇ ಪರಮಾತ್ಮನಾಗುತ್ತಾನೆ ಎಂದು ಪೂಜ್ಯ ಅಮೋಘಕೀರ್ತಿ ಮುನಿಮಹಾರಾಜರು ಹೇಳಿದರು.

ಅವರು ಶುಕ್ರವಾರ ನಾರಾವಿಯಲ್ಲಿ ಧರ್ಮನಾಥ ಸ್ವಾಮಿ ಬಸದಿಯಲ್ಲಿ ದೇವರ ದರ್ಶನ ಮಾಡಿದ ಬಳಿಕ ಧರ್ಮಶ್ರೀ ಸಭಾಭವನದಲ್ಲಿ ಮಂಗಲ ಪ್ರವಚನ ನೀಡಿದರು.

ಲೌಕಿಕ ಆಸೆ, ಆಕಾಂಕ್ಷೆಗಳನ್ನು ದೂರ ಮಾಡಿ, ಸತತ ಧರ್ಮದ ಅನುಷ್ಠಾನದೊಂದಿಗೆ ಜೀವನ ಪಾವನ ಮಾಡಿಕೊಳ್ಳಬೇಕು. ಜೀವನ, ಸಂಪತ್ತು ಎಲ್ಲಾ ಕ್ಷಣಿಕವಾಗಿದ್ದು ಐಸ್‌ಕ್ರೀಂ ನಂತೆ ಕರಗಿ ಹೋಗುತ್ತದೆ. ಯೌವನದಲ್ಲೆ ದಾನ, ಧರ್ಮಾದಿ ಸತ್ಕಾರ್ಯಗಳನ್ನು ಪರಿಶುದ್ಧ ಮನಸ್ಸಿನಿಂದ ಮಾಡಿ ಪುಣ್ಯ ಸಂಚಯದೊAದಿಗೆ ಮೋಕ್ಷ ಪ್ರಾಪ್ತಿಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಪೂಜ್ಯ ಅಮರಕೀರ್ತಿ ಮುನಿಮಹಾರಾಜರು ಮಂಗಲ ಪ್ರವಚನ ನೀಡಿ, ಮಾನಸಿಕ ಶಾಂತಿ ಮತ್ತು ನೆಮ್ಮದಿಗೆ ಹಾಗೂ ಆತ್ಮಕಲ್ಯಾಣಕ್ಕಾಗಿ ಧರ್ಮದ ಅವಶ್ಯಕತೆ ಇದೆ. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದಿAದ ಎಷ್ಟೇ ಸುಖ, ಸೌಲಭ್ಯ, ಸವಲತ್ತುಗಳು ದೊರಕಿದರೂ ಎಲ್ಲವೂ ತಾತ್ಕಾಲಿಕ ಹಾಗೂ ಕ್ಷಣಿಕ ಎಷ್ಟೇ ಸುಖ, ಸಂಪತ್ತು ಇದ್ದರೂ ಮಾನಸಿಕ ನೆಮ್ಮದಿ ಇರುವುದಿಲ್ಲ.

ಪ್ರತಿ ಕ್ಷೇತ್ರದಲ್ಲಿಯೂ ಇಂದು ಜ್ಞಾನದ ಅವಶ್ಯಕತೆ ಇದ್ದು, ಧರ್ಮಮಾರ್ಗದಲ್ಲಿ ನಡೆದು ಆತ್ಮಕಲ್ಯಾಣದೊಂದಿಗೆ ಶಾಶ್ವತ ಸುಖ-ಶಾಂತಿ, ನೆಮ್ಮದಿ ಪಡೆಯಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಎನ್. ಪ್ರೇಮ್ ಕುಮಾರ್ ಹೊಸ್ಮಾರು, ವಿಜಯ ಕುಮಾರ್ ನೂರಾಳಬೆಟ್ಟು, ಮೂಡಬಿದ್ರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ನಾರಾವಿ, ನಿರಂಜನ ಅಜ್ರಿ, ಶಿಶುಪಾಲ ಜೈನ್, ಪ್ರಕಾಶ್ ಜೈನ್, ಅಶೋಕ ಕುಮಾರ್ ವರಿಮಾರು, ಅರುಣಾ ಪ್ರಕಾಶ್, ಹರ್ಷೇಂದ್ರ ಜೈನ್, ಅಜಿತ, ಮುನಿರಾಜ ಜೈನ್, ಶಶಿಕಾಂತ ಜೈನ್, ರಾಜೇಂದ್ರ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Sneha Gowda

Recent Posts

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

8 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

33 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

46 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago