News Karnataka Kannada
Wednesday, May 01 2024
ಮಂಗಳೂರು

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

Mangaluru: Dc's mobile number hacked, DC urges people not to be cheated
Photo Credit :

ಮಂಗಳೂರು: ಉಪ್ಪಿನಂಗಡಿ ಸರಕಾರಿ ಕಾಲೇಜಿನ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರ ಮೇಲೆ ನಡೆದ ಹಲ್ಲೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಹೇಳಿದರು.

ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ಮತ್ತು ದುಷ್ಕರ್ಮಿಗಳನ್ನು ಬಂಧಿಸುಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ನೀಡಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದರು.

ಕಾಲೇಜಿಗೆ ಪತ್ರಕರ್ತರು ವಾಸ್ತವ ವರದಿ ಮಾಡಲು ತೆರಳಿದಾಗ ವಿದ್ಯಾರ್ಥಿಗಳು ಪತ್ರಕರ್ತರನ್ನು ದಿಗ್ಬಂಧಿಸಿ, ದುವರ್ತನೆ ತೋರಿಸಿದ್ದಾರೆ. ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೆಗೊಳ್ಕಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರ ಪತ್ರಕರ್ತರಿಗೆ ಸೂಕ್ತ ಭದ್ರತೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮನವಿ ಮಾಡಿದರು. ದಕ್ಷಿಣ‌ ಕನ್ನಡ ಜಿಲ್ಲಾ‌ಎಸ್ಪಿ ಭಗವಾನ್ ಹೃಷಿಕೇಶ್ ಸೋನಾವಣೆ ಅವರಿಗೂ ಮನವಿ ಸಲ್ಲಿಸಲಾಯಿತು.

ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷರಾದ ಭಾಸ್ಕರ ರೈ ಕಟ್ಟ, ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸದಸ್ಯರಾದ ವಿಲ್ಫ್ರೆಡ್, ಭರತ್ ರಾಜ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರೀಫ್ ಪಡುಬಿದ್ರಿ, ಸದಸ್ಯರಾದ ಕಿಶನ್, ಅಶೋಕ್ ಪೂಜಾರಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು