Categories: ಮಂಗಳೂರು

ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ವಿಭಾಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು : ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ರಾಜ್ಯದ ಪ್ರತಿ ಜಿಲ್ಲಾಸ್ಪತ್ರೆ ಮತ್ತು 100ಕ್ಕಿಂತ ಅಧಿಕ ಬೆಡ್‌ ಇರುವ ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ವಿಭಾಗ ತೆರೆಯಲಾಗುವುದು. ಎಲ್ಲ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌, ಐಸಿಯು ಹಾಗೂ ಆಕ್ಸಿಜನ್‌ ಬೆಡ್‌ಗಳನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಮಂಗಳೂರಿನ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಗುರುವಾರ ಕೋವಿಡ್‌ ನಿಯಂತ್ರಣ ಕುರಿತ ಸಭೆ ನಡೆಸಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ ಈ ವಿಚಾರ ತಿಳಿಸಿದರು. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು, ಐಸಿಯು, ಆಕ್ಸಿಜನ್‌ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಕೊರೋನಾದಿಂದ ಯಾವುದೇ ಪರಿಸ್ಥಿತಿ ಉದ್ಭವಿಸಿದರೂ ಆರೋಗ್ಯ ಇಲಾಖೆ ಸನ್ನದ್ಧವಾಗಿರಬೇಕಿದ್ದು, ಸೌಲಭ್ಯ ಹೆಚ್ಚಿಸುವ ಕಾರ್ಯಕ್ಕೆ ಇನ್ನಷ್ಟುವೇಗ ನೀಡಲಾಗುವುದು ಎಂದರು.

Raksha Deshpande

Recent Posts

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

2 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

21 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

21 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

40 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

44 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

1 hour ago