Categories: ಮಂಗಳೂರು

ತುಳು ಪಾಡ್ದನ ಸಾಹಿತ್ಯ ಪರಂಪರೆ ಸಂರಕ್ಷಿಸಬೇಕು : ಪುರುಷೋತ್ತಮ ಭಂಡಾರಿ

ಮಂಗಳೂರು : ತುಳುನಾಡಿನ ಪ್ರಾಚೀನ-ಪರಂಪರೆಯನ್ನು ಪ್ರಸಾರ-ಪ್ರಚಾರ ನೀಡಿರುವ ಪಾಡ್ದನ ಸಾಹಿತ್ಯ ಮುಂದಿನ ತಲೆಮಾರಿಗೂ ತಲುಪಬೇಕು, ಇದನ್ನು ಸಂರಕ್ಷಿಸುವ ಕಾರ್ಯ ಪ್ರಶಂಸನೀಯ, ತುಳು ಅಕಾಡೆಮಿಯ ಜವಬ್ದಾರಿಯನ್ನು ಇತರ ಅಕಾಡೆಮಿಯೂ ನಡೆಸಿದಲ್ಲಿ ಈ ನಾಡಿನ ಭವ್ಯ ಪರಂಪರೆಯನ್ನು ಭವಿಷ್ಯದಲ್ಲಿಯೂ ಪ್ರಚಲಿತದಲ್ಲಿರಲು ಸಾಧ್ಯವಾಗುತ್ತದೆ ಎಂದು ಮಂಗಳೂರಿನ ಸಂಸ್ಕಾರ ಭಾರತಿಯ ಅಧ್ಯಕ್ಷ ಪುರುಷೋತ್ತಮ ಭಂಡಾರಿ ಹೇಳಿದರು.

ಅವರು ದಕ್ಷಿಣ ಕನ್ನಡ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸಂಸ್ಕಾರ ಭಾರತಿ ಮಂಗಳೂರು, ಪಂಬದರ ಅಭ್ಯುದಯ ಯುವಜನ ಸೇವಾ ಟ್ರಸ್ಟ್‌ನ ಜಂಟಿ ಸಂಯೋಜನೆಯಲ್ಲಿ ನಡೆದ ಪಾಡ್ದನ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅಧ್ಯಕ್ಷತೆಯನ್ನು ವಹಿಸಿ, ತುಳು ಅಕಾಡೆಮಿಯು ಬೆಳ್ಳಿ ವರ್ಷದ ಸಂಭ್ರಮದಲ್ಲಿದ್ದು, ಅನೇಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ, ಅಕಾಡೆಮಿಯ ಮೂಲಕ ಪಾಡ್ದನಕ್ಕೆ ವಿಶೇಷ ಆದ್ಯತೆ ನೀಡಿ ಅದರ ದಾಖಲೀಕರಣಗೊಳಿಸುತ್ತಿರುವುದರಿಂದ ಇದರ ಮೌಲ್ಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿಯನ್ನು ಹೆಚ್ಚಿಸಿಕೊಂಡಿದೆ ಎಂದರು.

ಈ ಸಂದರ್ಭದಲ್ಲಿ ಪಾಡ್ದನ ಕಮ್ಮಟದಲ್ಲಿ ಭಾಗವಹಿಸಿದ ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಅನುದಾನದಲ್ಲಿ ಕಾರ್ಯಾಗಾರ ಸಂಪನ್ನಗೊಂಡಿತು. ಸಂಸ್ಕಾರ ಭಾರತಿ ಇದರ ಪ್ರಾಂತ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಪಡುಪೆರಾರ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಅಮಿತಾ ಮೋಹನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.  ಪುರುಷೋತ್ತಮ ಗೋಳಿಪಲ್ಕೆ ಸ್ವಾಗತಿಸಿದರು. ಕಾರ್ತಿಕ್ ಪ್ರಾರ್ಥಿಸಿದರು.ಗೋಪಾಲ ಗೋಳಿ ಪಲ್ಕೆ ವಂದಿಸಿದರು.

Sneha Gowda

Recent Posts

ಭಾರೀ ಮಳೆ: ಮಣ್ಣಿನ ಕುಸಿತದಿಂದ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ

ಬ್ರೆಜಿಲ್‌ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವಿಗೀಡಾಗಿದ್ದಾರೆ.…

8 mins ago

ಆಫ್ರಿಕಾದಲ್ಲಿ ಮಳೆಯಿಂದ ಬಾರಿ ಪ್ರವಾಹ : 350ಕ್ಕೂ ಹೆಚ್ಚು ಸಾವು, 90 ಜನರು ನಾಪತ್ತೆ

ಕೀನ್ಯಾ ಮತ್ತು ತಂಜಾನಿಯಾದಲ್ಲಿ ಕಳೆದ ಒಂದು ವಾರದಿಂದ ಸುರಿದ ಧಾರಕಾರ ಮಳೆಯಿಂದಾಗಿ ರಸ್ತೆಗಳೆಲ್ಲ ನದಿಯಂತಾಗಿವೆ. ಮನೆಯಲ್ಲಿ ನಗುಗ್ಗಿದ ನೀರು ಮನೆ…

24 mins ago

ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ : ವಿಡಿಯೋ ವೈರಲ್‌

ಕಜಕೀಸ್ತಾನದ  ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ.

39 mins ago

ಸಿಲಿಂಡರ್‌ ಬ್ಲಾಸ್ಟ್‌ನಿಂದ ಮನೆಯಲ್ಲಿ ಬೆಂಕಿ : 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ…

45 mins ago

ಬೀದರ್‌ನ ’14 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ

'ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 5ರಂದು ನಡೆಯಲಿದೆ' ಎಂದು ನೀಟ್‌ ಸಂಯೋಜಕ…

1 hour ago

ಮೋದಿ ಬಂದರೂ ಮಾದಿಗರು ಬಿಜೆಪಿ ಬೆಂಬಲಿಸಲ್ಲ: ಚಂದ್ರಕಾಂತ ಹಿಪ್ಪಳಗಾಂವ

ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಪರಿಶಿಷ್ಟ…

1 hour ago