Categories: ಮಂಗಳೂರು

ದಕ್ಷಿಣಕನ್ನಡ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಹಿಂದೂ ಜಾಗರಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ದೂರು

ಬಂಟ್ವಾಳ : ಶ್ರೀಕ್ಷೇತ್ರ ಕಾರಿಂಜದಲ್ಲಿ ಇತ್ತೀಚೆಗೆ ನಡೆದ  ಪ್ರತಿಭಟನಾ ಸಭೆಯಲ್ಲಿ ದಕ್ಷಿಣಕನ್ನಡ  ಜಿಲ್ಲಾಧಿಕಾರಿಯ ವಿರುದ್ಧ  ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ಧ  ಸ್ವತಃ ಜಿಲ್ಲಾಧಿಕಾರಿಯೇ ದೂರು ನೀಡಿದ್ದು, ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರು ಈ ದೂರು ನೀಡಿದ್ದು, ಐಪಿಸಿ ಸೆಕ್ಷನ್ 153,117, 504, 506, 189 ರ ಅನ್ವಯ ಪ್ರಕರಣ ದಾಖಲಾಗಿದೆ. ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಕಾರಿಂಜದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆದ ರುದ್ರಗಿರಿ ರಣಕಹಳೆ ಎಂಬ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಗದೀಶ್ ಕಾರಂತ್, ಬಂಟ್ವಾಳ ತಾಲೂಕಿನ ಕಾರೀಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಗಣಿಗಾರಿಕೆಯನ್ನು ನಿಲ್ಲಿಸಲು ಡಿಸೆಂಬರ್ 21 ರವರೆಗೆ ಗಡುವು ಕೊಟ್ಟಿದ್ದೇವೆ, ಇಲ್ಲದಿದ್ದರೆ ಡಿಸೆಂಬರ್ 21 ಕ್ಕೆ ಎಲ್ಲರೂ ಸಿದ್ದರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಜಿಲ್ಲಾಧಿಕಾರಿಗಳ ಕಛೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿಯನ್ನು ಹಿಡಿಯುತ್ತೀವಿ. ತಾಕತ್ತಿದ್ದರೆ ಕಲ್ಲುಗಣಿಗಾರಿಕೆಯನ್ನು ನಿಲ್ಲಿಸೋ. ಇಲ್ಲವಾದರೇ ಟ್ರಾನ್ಸ್‌ ಫರ್ ತೆಗೆದುಕೊಂಡು ಹೋಗೋ. ಎಂಬಿತ್ಯಾದಿ ರೀತಿಯಲ್ಲಿ ಏಕವಚನ ಮತ್ತು  ಅಸಭ್ಯವಾಗಿ ಮಾತುಗಳನ್ನಾಡುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಿಸಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪಾರಾಧಕ್ಕೆ ದುಷ್ಪ್ರೇರಣೆ ನೀಡಿರುತ್ತಾರೆ.

ಜಗದೀಶ್ ಕಾರಂತ್‌ ರವರು ಅಪರಾಧ ಕೃತ್ಯವನ್ನು ಎಸಗುವ ಮನೋ ಧೋರಣೆ  ಹೊಂದಿ ಪ್ರಚೋದಾನಾಧಿಕಾರಿಯಾಗಿ ಬೆದರಿಕೆಯೊಡ್ಡಿರುವುದರಿಂದ ಮತ್ತು ಸಾವಿರಾರು ಜನಕ್ಕೆ ಅಪರಾಧಿಕ ಕೃತ್ಯವೆಸಗಲು ಪ್ರೇರಣೆ ನೀಡಿ ಅಪರಾಧಿಕಾ ಭೀತಿಯನ್ನುಂಟು ಮಾಡಿರುತ್ತಾರೆ. ಹಾಗೂ ಅಪರಾಧ ಕೃತ್ಯ ನಡೆಸಲು ಪ್ರೇರಣೆಯನ್ನು ಮತ್ತು ಬೆದರಿಕೆಯನ್ನೊಡ್ಡಿದ್ದು, ಡಿಸೆಂಬರ್ 21 ಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಛೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಗಳ ಕೊರಳಪಟ್ಟಿ ಹಿಡಿಯಿರಿ ಎಂದು ಪ್ರಚೋದಿಸುವ ಮೂಲಕ ಸಾರ್ವಜನಿಕ ನೌಕರನಿಗೆ ಅಪರಾಧಿಕ ಭೀತಿಯನ್ನುಂಟು ಮಾಡಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಹಾನಿ ಮತ್ತು ಹಲ್ಲೆ ಮಾಡಲು  ಪ್ರಚೋದಿಸಿ  ಬೆದರಿಕೆ ಹಾಕಿರುವುದಾಗಿ ‌ಜಿಲ್ಲಾಧಿಕಾರಿಯವರು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿದ್ದು,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.

Gayathri SG

Recent Posts

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

18 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

38 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

52 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

1 hour ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

1 hour ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago