ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 38 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 90 ಮಂದಿ ಗುಣಮುಖರಾಗಿದ್ದಾರೆ. ಸೋಮವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.0.59 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 114892ಕ್ಕೆ ಏರಿಕೆಯಾಗಿದೆ. ಈ ಪೈಕಿ ೪೪೫ ಸಕ್ರಿಯ ಪ್ರಕರಣಗಳು. 112777 ಮಂದಿ ಗುಣಮುಖರಾಗಿದ್ದಾರೆ. 1670 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 88182 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 10710970 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.