ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ನ.18) 9 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಗುರುವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
20 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 109 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.18 ಆಗಿದೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 88,778 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ.
ರೂ.1,07,70,670 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.