ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 11 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
11 ಮಂದಿ ಗುಣಮುಖರಾಗಿದ್ದಾರೆ. ಸೋಮವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.0.25 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 115862 ಕ್ಕೆ ಏರಿಕೆಯಾಗಿದೆ. ಈ ಪೈಕಿ 136 ಸಕ್ರಿಯ ಪ್ರಕರಣಗಳು. 114032 ಮಂದಿ ಗುಣಮುಖರಾಗಿದ್ದಾರೆ. 1694 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ88904 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 10783270 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.