ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 782 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. 216 ಮಂದಿ ಗುಣಮುಖರಾಗಿದ್ದಾರೆ.
ಭಾನುವಾರ ಜಿಲ್ಲೆಯಲ್ಲಿ ಕೊರೋನಾದಿಂದ ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಈ ಪೈಕಿ ಒಬ್ಬರು ಮಂಗಳೂರು ತಾಲೂಕು ನಿವಾಸಿ, ಇನ್ನೊಬ್ಬರು ಹೊರಜಿಲ್ಲೆಯವರು. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.೬6.45 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 121757ಕ್ಕೆ ಏರಿಕೆಯಾಗಿದೆ. ಈ ಪೈಕಿ 4011 ಸಕ್ರಿಯ ಪ್ರಕರಣಗಳು. 116038 ಮಂದಿ ಗುಣಮುಖರಾಗಿದ್ದಾರೆ.1708 ಮಂದಿ ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕಿನ ಖಾಸಗಿ ನರ್ಸಿಂಗ್ ಕಾಲೇಜು ಹಾಸ್ಟೆಲೊಂದರಲ್ಲಿ ಕ್ಲಸ್ಟರ್ ಪ್ರಕರಣ ಗುರುತಿಸಲಾಗಿದೆ. ಇಲ್ಲಿ 25 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 10 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.