ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 127 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಶನಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಒಬ್ಬರು ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
129 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 1,063 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.29ಕ್ಕೆ ಏರಿಕೆ ಆಗಿದೆ.
ಜಿಲ್ಲೆಯಲ್ಲಿ ಈ ತನಕ ಒಟ್ಟು 1,13,855 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. 1,11,145 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 1,647 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 87,693 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,06,62,070 ದಂಡ ವಸೂಲಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ತನಕ ಕರ್ಫ್ಯೂ ಜಾರಿಯಲ್ಲಿದೆ.