ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.17) 43 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 92 ಮಂದಿ ಬುಧವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,32,897 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಗುರುವಾರ ಇಬ್ಬರ ಸಾವು ಸಂಭವಿಸಿದೆ.
ಅದರಲ್ಲಿ ಒಬ್ಬರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,836 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ. ದಕ್ಷಿಣ ಕನ್ನಡದಲ್ಲಿ 469 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.84ಕ್ಕೆ ಇಳಿದಿದೆ.