Categories: ಮಂಗಳೂರು

ದೇಶವನ್ನು ಪರಮವೈಭವದ ಸ್ಥಿತಿಗೆ ಕೊಂಡೊಯ್ಯುವುದೇ ಬಿಜೆಪಿಯ ಧ್ಯೇಯವಾಗಿದೆ : ಸಂಸದ ನಳಿನ್ ಕುಮಾರ್ ಕಟೀಲು

ಮಂಗಳೂರು: ದೇಶದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಹೊರತುಪಡಿಸಿ ನೆಹರೂ ಅವರಿಂದ ಮನಮೋಹನ್ ಸಿಂಗ್‌ವರೆಗಿನ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ, ತುಷ್ಟೀಕರಣ, ವಿಭಜನೆಯ ರಾಜನೀತಿ ಪ್ರಧಾನವಾಗಿತ್ತು. ಬಿಜೆಪಿಯ ಆಡಳಿತದಲ್ಲಿ ಭ್ರಷ್ಟಾಚಾರದ ಯಾವುದೇ ಆರೋಪವಿಲ್ಲ. ದೇಶವನ್ನು ಪರಮವೈಭವದ ಸ್ಥಿತಿಗೆ ಕೊಂಡೊಯ್ಯುವುದೇ ಬಿಜೆಪಿಯ ಧ್ಯೇಯವಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ಎರಡು ದಿನಗಳ ಬಿಜೆಪಿ ಕರ್ನಾಟಕ ರಾಜ್ಯ ಪ್ರಕೋಷ್ಠಗಳ ಚಿಂತನಾ ವರ್ಗ ಉದ್ಘಾಟಿಸಿ ಅವರು ಮಾತನಾಡಿದರು.

ಅಟಲ್ ಬಿಹಾರಿ ವಾಜಪೇಯಿ ಹಾಗೂ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯೊಂದಿಗೆ ಬಿಜೆಪಿ ಸರಕಾರ ಆಡಳಿತ ನಡೆಸುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಹಲವು ಬಾರಿ ವಿಭಜನೆಗೊಂಡಿವೆ. ಆದರೆ, ತನ್ನ ಸಿದ್ಧಾಂತ ಮತ್ತು ವಿಚಾರಧಾರೆಯ ಬಲದಿಂದ ಬಿಜೆಪಿ ರಾಜಕೀಯ ಪಕ್ಷವಾಗಿ ವಿಭಜನೆಗೊಳ್ಳದೆ ಪ್ರಬಲವಾಗಿ ತಳವೂರಿದೆ ಎಂದರು.

ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಧ್ಯೇಯದೊಂದಿಗೆ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ. ಬಿಜೆಪಿ ತನ್ನ ಕಾರ್ಯಪದ್ಧತಿ, ವಿಚಾರಧಾರೆಯೊಂದಿಗೆ ರಾಜಿ ಮಾಡಿಕೊಂಡಿಲ್ಲ. ಧ್ಯೇಯ ನಿಷ್ಠ ಕಾರ್ಯಕರ್ತರಲ್ಲಿ ವ್ಯಕ್ತಿತ್ವ ನಿರ್ಮಾಣಕ್ಕಾಗಿ ಚಿಂತನಾ ವರ್ಗ ನಡೆಸಲಾಗುತ್ತಿದೆ ಎಂದರು.

ದೇಶದಲ್ಲಿ ಮೊದಲ ಬಾರಿಗೆ ಬಿಜೆಪಿ ಕರ್ನಾಟಕ ಘಟಕ ವತಿಯಿಂದ ಮಂಗಳೂರಿನಲ್ಲಿ ಪ್ರಕೋಷ್ಠಗಳ ಚಿಂತನಾ ವರ್ಗ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ೨೪ ಪ್ರಕೋಷ್ಠ ರಚಿಸಿ, ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಬಿಜೆಪಿ ರಾಜ್ಯ ಘಟಕದ ಸಹಲ್, ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಮತ್ತು ಪೂರ್ಣ ಪ್ರಮಾಣದಲ್ಲಿ ಪ್ರಕೋಷ್ಠಗಳ ಸಂಘಟನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ನಳಿನ್ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಎಂ. ಮಾತನಾಡಿ, ದೇಶದಲ್ಲಿ ಪರಿವರ್ತನೆ ತರಬೇಕು ಎಂಬ ದೃಷ್ಟಿಯಿಂದ ಬಿಜೆಪಿ ಅಸ್ತಿತ್ವಕ್ಕೆ ಬಂದಿದೆ. ಸಿದ್ಧಾಂತ, ಕಾರ್ಯಪದ್ಧತಿ, ನಿರಂತರ ಪರಿಶ್ರಮದಿಂದ ಪಕ್ಷ ಇಂದು ಬೆಳೆದಿದೆ. ಕಾರ್ಯಕರ್ತರನ್ನು ಮೌಲ್ಯಾಧಾರಿತ ಬದುಕಿನ ಕಡೆಗೆ ಕೊಂಡೊಯ್ಯಲು ಚಿಂತನಾ ವರ್ಗ ಆಯೋಜಿಸಲಾಗುತ್ತಿದೆ ಎಂದರು.

ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಂ.ಬಿ. ಭಾನುಪ್ರಕಾಶ್ ಉಪಸ್ಥಿತರಿದ್ದರು. ಕೈಗಾರಿಕಾ ಪ್ರಕೋಷ್ಠ ರಾಜ್ಯ ಸಂಚಾಲಕ ಪ್ರದೀಪ ಪೈ ಸ್ವಾಗತಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ ವಂದಿಸಿದರು. ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕ ಡಾ. ಶಿವಯೋಗಿಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

Sneha Gowda

Recent Posts

ಶ್ರೀನಿವಾಸ ಪ್ರಸಾದ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

4 mins ago

ಶ್ರೀನಿವಾಸ ಪ್ರಸಾದ್‌ರಂತಹ ಧೀಮಂತರು ಈಗೆಲ್ಲಿದ್ದಾರೆ: ರಾಜು ಆಲಗೂರ್ ತೀವ್ರ ಕಳವಳ

ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು…

9 mins ago

ಶಬ್ದ ಮಾಲಿನ್ಯದಿಂದ ನಿದ್ರೆಗೆ ಭಂಗ: ಹೃದಯಾಘಾತದ ಆತಂಕ ಹೆಚ್ಚಳ

ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…

36 mins ago

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…

56 mins ago

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…

1 hour ago

ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ: ಮೋದಿಗೆ ಓವೈಸಿ ಪ್ರಶ್ನೆ

ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್…

1 hour ago