News Karnataka Kannada
Sunday, April 28 2024
ಮಂಗಳೂರು

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಮಗ ಸಾವು, ತಂದೆಗೆ ಗಂಭೀರ ಗಾಯ

Four killed in accident between truck and car
Photo Credit :

ಬಂಟ್ವಾಳ : ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮಗನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಗ ಮೃತಪಟ್ಟು ತಂದೆ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ರವರ ಪುತ್ರ, ಸ್ಥಳೀಯ 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11 ವ.) ಮೃತ ದುರ್ದೈವಿ, ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ದಿನೇಶ್ ರವರಿಗೂ ಗಾಯವಾಗಿದೆ.

ಬುಡೋಳಿಯ ಶಾಲೆಯೊಂದರಲ್ಲಿ ಆರನೇ ತರಗತಿ ಕಲಿಯುತ್ತಿರುವ ಅದ್ವಿತ್ ಸಾಯಂಕಾಲ ಶಾಲೆ ಬಿಟ್ಟು ತಂದೆ ದಿನೇಶ್ ರವರ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು‌. ಅಲ್ಲಿ ಅದ್ವಿತ್ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾಗಿದ್ದ ಲಾರಿಯನ್ನು ನೆಲ್ಯಾಡಿ ಸಮೀಪ ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಪಡೆದುಕೊಂಡು, ಪರಾರಿಯಾಗಿದ್ದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು