ಮಂಗಳೂರು, ಡಿ.1: ದ.ಕ.ಜಿಲ್ಲೆಯಲ್ಲಿ ಬುಧವಾರ 13 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 22 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.17 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 22,52,310 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 21,36,416 ನೆಗೆಟವ್ ಮತ್ತು 1,15,894 ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಸೋಂಕಿತರ ಪೈಕಿ ಒಟ್ಟು 1,14,062 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,694 ಮಂದಿ ಈವರೆಗೆ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 138 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 88,943 ಪ್ರಕರಣ ದಾಖಲಿಸಿ, 1,07,87,170 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.