ಮಂಗಳೂರು : ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಸೋಮಾವಾರ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಅವರಿಗೆ ಶಿಷ್ಟಾಚಾರದಂತೆ ದ.ಕ.ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.