ಬೆಳ್ತಂಗಡಿ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಬುಧವಾರ ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ. ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕರು ಮಂಗಲ ಪ್ರವಚನ ನೀಡುವರು.
ಪಾದಾಭಿಷೇಕಕ್ಕೆ ಪೂರ್ವಭಾವಿಯಾಗಿ ಮಂಗಳವಾರ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನ ಶುದ್ಧಿ, ನಾಂದಿ ಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.