Categories: ಮಂಗಳೂರು

ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಯೋಗ ಮಹೋತ್ಸವ

ಬೆಳ್ತಂಗಡಿ: ನಮ್ಮ ದೇಹ, ಮಾತು ಮತ್ತು ಮನಸ್ಸನ್ನು ಶುದ್ಧೀಕರಣಗೊಳಿಸಿ ಆರೋಗ್ಯ ಭಾಗ್ಯ ಕಾಪಾಡಲು ಯೋಗ ಪ್ರೇರಕ ಶಕ್ತಿಯಾಗಿದೆ. ರೋಗ ಮುಕ್ತ ಜೀವನಕ್ಕೆ ಯೋಗ ಅಗತ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಯೋಗ ಮಹೋತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಭಾರತವು ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆಯೇ ಯೋಗ. ಸಾವಿರಾರು ವರ್ಷಗಳಿಂದ ಭಾರತದ ಋಷಿ, ಮುನಿಗಳು ಪ್ರಕೃತಿಯ ಪ್ರಶಾಂತ ಮಡಿಲಲ್ಲಿ ಯೋಗಾಭ್ಯಾಸ, ಧ್ಯಾನ, ಪ್ರಾರ್ಥನೆ ಮಾಡಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಭಾಗ್ಯವನ್ನು ಹೊಂದಬಹುದು ಎಂದು ಸಾಧಿಸಿ ತೋರಿಸಿದ್ದಾರೆ. ಈಗ ಯೋಗಕ್ಕೆ ಪರ್ಯಾಯವಾಗಿ ವಾಕಿಂಗ್, ಜಾಗಿಂಗ್ , ಈಜು ಮೊದಲಾದವುಗಳನ್ನು ಬಳಸಿದರೂ, ಯೋಗ ಆರೋಗ್ಯ ರಕ್ಷಣೆಗೆ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ ಎಂದು ಹೆಗ್ಗಡೆಯವರು ಅಭಿಪ್ರಾಯಪಟ್ಟರು.

 

ಬ್ಯಾಂಕ್ ಆಫ್ ಬರೋಡಾದ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ, ಆರ್. ಶುಭಾಶಂಸನೆ ಮಾಡಿ ನಿತ್ಯ ಯೋಗಾಭ್ಯಾಸದಿಂದ ಸುಖ, ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು. ವಿದ್ಯಾರ್ಥಿಗಳು ಕೇವಲ ಗರಿಷ್ಠ ಅಂಕಗಳಿಸುವುದೇ ಶಿಕ್ಷಣದ ಉದ್ದೇಶವಲ್ಲ. ಭಾವೀ ಸಮಾಜದ ಸಭ್ಯ, ಸುಸಂಸ್ಕøತ ನಾಗರಿಕರನ್ನು ರೂಪಿಸುವುದೇ ನಿಜವಾದ ಶಿಕ್ಷಣ. ಯೋಗಾಭ್ಯಾಸದಿಂದ ಶಿಕ್ಷಣ ಶಿಕ್ಷೆ ಆಗುವುದಿಲ್ಲ. ದೈಹಿಕ ಹಾಗೂ ಮಾನಸಿಕ ಆರೋಗ್ಯದೊಂದಿಗೆ ಶಿಕ್ಷಣ ಸಂತಸದಾಯಕ ಕಲಿಕೆಯಾಗುತ್ತದೆ ಎಂದು ಹೇಳಿದರು.

ಬ್ಯಾಂಕ್ ಆಫ್ ಬರೋಡಾದ ಮಂಗಳೂರು ವಲಯದ ಮುಖ್ಯಸ್ಥ ಆರ್. ಗೋಪಾಲಕೃಷ್ಣ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಧರ್ಮಸ್ಥಳದ ಸೇವೆ ಶ್ಲಾಘನೀಯವಾಗಿದ್ದು, ಬ್ಯಾಂಕ್ ಆಫ್ ಬರೋಡಾ ವತಿಯಿಂದ ಧರ್ಮಸ್ಥಳಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಐದು ಮಂದಿಗೆ ವೈದ್ಯಕೀಯ ಕಿಟ್ ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಯೋಗ ವಿಭಾಗದ ಡೀನ್ ಡಾ. ಶಿವಪ್ರಸಾದ ಶೆಟ್ಟಿ ಧನ್ಯವಾದವಿತ್ತರು. ಪ್ರೊ. ಜೋಸ್ನಾ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಸಾಧಕರಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು. ಶಾಂತಿವನ ಟ್ರಸ್ಟ್‍ನ ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ಉಪಸ್ಥಿತರಿದ್ದರು.

Sneha Gowda

Recent Posts

ನಾಳೆ (ಏ. 29) ಬಾಗಲಕೋಟೆಗೆ ಪ್ರಧಾನಿ ಮೋದಿ ಆಗಮನ

ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ…

45 mins ago

1.5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ…

1 hour ago

ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು: ಅರವಿಂದ ಬೆಲ್ಲದ

ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ…

1 hour ago

ವಾಕಿಂಗ್ ಗೆ ಹೋದ ಪೊಲೀಸ್‌ ಕಾನಸ್ಟೇಬಲ್‌ ನಾಪತ್ತೆ

ವಾಕಿಂಗ್ ಮಾಡಲು ಹೋಗಿದ್ದ ಪೊಲೀಸ್‌ ಕಾನಸ್ಟೇಬಲ್‌ ಒಬ್ಬರು ವಾಪಾಸ್ ಮನೆಗೆ ಬಾರದೇ ಕಾಣೆಯಾಗಿರುವ ಘಟನೆ ಏಪ್ರಿಲ್ 24 ರಂದು ನಡೆದಿದ್ದು,…

2 hours ago

ಸುನೀಲ್ ಬೋಸ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ : ಮಾಜಿ ಶಾಸಕ ಆರ್ ನರೇಂದ್ರ

ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು…

2 hours ago

ಸೈಕಲ್​ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದೊಯ್ದ ಡ್ರೈವರ್

ಸೈಕಲ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್​ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ…

2 hours ago