News Karnataka Kannada
Monday, April 29 2024
ಮಂಗಳೂರು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Cleaning Program
Photo Credit :

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 6 ನೇ ವರ್ಷದ ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಜ.7 ರಿಂದ 13 ರವರೆಗೆ ನಡೆಯಲಿದೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ತಿಳಿಸಿದ್ದಾರೆ.

ಧಾರ್ಮಿಕ ಶ್ರದ್ಧಾಕೇಂದ್ರಗಳು ಗ್ರಾಮಗಳ ಪ್ರಮುಖ ಭಾಗವಾಗಿದ್ದು. ಇವುಗಳನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ಪರಿಸರ ಸ್ವಚ್ಛತಾ ಮನೋಭಾವವು ಸಾರ್ವತ್ರಿಕವಾಗುತ್ತದೆ. ಸಾಮಾನ್ಯ ಜನರು ಶ್ರದ್ಧಾಕೇಂದ್ರಗಳ ಕುರಿತು ಪವಿತ್ರ ಭಾವನೆಗಳನ್ನು ಇಟ್ಟುಕೊಂಡಿದ್ದಾರೆ. ದೇವಾಲಯಗಳ ಸುತ್ತಮುತ್ತ ಮಲಿನವಾಗಿರುವುದನ್ನು ಕಾಣುತ್ತೇವೆ. ದೇವಾಲಯಗಳು ವಿಶಾಲವಾಗಿದ್ದಲ್ಲಿ ಇವುಗಳನ್ನು ಸ್ವಚ್ಛಗೊಳಿಸಲು ಜನಸಹಭಾಗಿತ್ವದ ಅವಶ್ಯಕತೆ ಇರುತ್ತದೆ. ಈ ಎಲ್ಲಾ ಅಂಶಗಳನ್ನು ಗಮದಲ್ಲಿಟ್ಟುಕೊಂಡು ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಜನ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ.

ವರ್ಷದಲ್ಲಿ 2 ಬಾರಿ ಅಂದರೆ ಆಗಸ್ಟ್ 15 ಮತ್ತು ಜನವರಿ 14 ರ ಸಂದರ್ಭ ಸಪ್ತಾಹದ ಮೂಲಕ ಸ್ವಯಂ ಸೇವಕರು ಶ್ರದ್ಧಾಕೇಂದ್ರಗಳಾದ ದೇವಸ್ಥಾನ, ಬಸದಿ, ಮಸೀದಿ, ಚರ್ಚ್‍ಗಳ ಸ್ವಚ್ಛತೆಯನ್ನು ಕೈಗೊಳ್ಳುತ್ತಾರೆ. ಕಳೆದ 6 ವರ್ಷಗಳಿಂದ ನಿರಂತರವಾಗಿ ಸ್ವಸಹಾಯ ಸಂಘಗಳ ಸದಸ್ಯರು ಶ್ರದ್ಧಾಕೇಂದ್ರದ ಸ್ವಚ್ಛತೆಯನ್ನು ಕೈಗೊಳ್ಳುತ್ತಿದ್ದು, ಈ ಬಾರಿ ಮಕರ ಸಂಕ್ರಾತಿ ಅಂದರೆ ಉತ್ತರಾಯಣ ಪುಣ್ಯ ಕಾಲ ಜನವರಿ 14 ರ ಮೊದಲು ರಾಜ್ಯದ ಎಲ್ಲಾ ಶ್ರದ್ಧಾಕೇಂದ್ರಗಳು ಸ್ವಚ್ಛ ಹಾಗೂ ಪಾವಿತ್ರ್ಯತೆಯಿಂದ ಕೂಡಿರಬೇಕೆಂಬ ಉದ್ದೇಶದಿಂದ ಜನವರಿ 7 ರಿಂದ 13 ರವರೆಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹವನ್ನು ನಡೆಸಲಾಗುತ್ತಿದೆ.

ಈ ಬಾರಿ ರಾಜ್ಯದಾದ್ಯಂತ 10,543 ಶ್ರದ್ಧಾಕೇಂದ್ರಗಳನ್ನು ಗುರುತಿಸಲಾಗಿದ್ದು ಸುಮಾರು 267,679 ಸ್ವಯಂ ಸೇವಕರು ಈ ಸಪ್ತಾಹದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಶ್ರದ್ಧಾಕೇಂದ್ರಗಳ ಅಭಿಯಾನದಲ್ಲಿ ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾಮಪಂಚಾಯತ್‍ನ ಸದಸ್ಯರು ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿ ರಾಜ್ಯಾದಾದ್ಯಂತ ನಡೆಯುವ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ.

ಸ್ವಚ್ಛತಾ ಕಾರ್ಯಕ್ರಮಗಳ ವಿವರ:
 ದೇವಸ್ಥಾನದ ಸುತ್ತಮುತ್ತಲಿನ ಗಿಡ ಘಂಟಿಗಳನ್ನು ತೆಗೆದು ಸ್ವಚ್ಛಗೊಳಿಸುವುದು.
 ಮಂದಿರ, ಮಸೀದಿಗಳ ಆವರಣ ಸ್ವಚ್ಛತೆ, ಒಳಾಂಗಣ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು.
 ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವತ ಕಟ್ಟೆ/ಅರಳಿಕಟ್ಟೆ ಸ್ವಚ್ಛಗೊಳಿಸುವುದು.
 ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ನಾನಕಟ್ಟೆ, ನದಿ ತೀರಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡು ಪ್ಲಾಸ್ಟಿಕ್, ಬಟ್ಟೆಬರೆ ಕಸಗಳನ್ನು ನದಿಗೆ ಎಸೆಯದಂತೆ ಅರಿವು ಮೂಡಿಸಲಾಗುವುದು.
 ಚರ್ಚ್, ಮಸೀದಿಗಳ ಸ್ವಚ್ಛತೆ ನಡೆಸಲಾಗುವುದು.
 ಸಾರ್ವಜನಿಕ ಶೌಚಾಲಯ, ನಗರ ಸ್ವಚ್ಛತೆ, ಬೀದಿ ಸ್ವಚ್ಛತೆಗೆ ಒತ್ತು ನೀಡಲಾಗುವುದು.
 ಶ್ರದ್ಧಾಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಬಟ್ಟೆ ಚೀಲ ಬಳಕೆ ಮಾಡುವುದು.
 ಜಾತ್ರೆ, ವಿಶೇಷ ಕಾರ್ಯಕ್ರಮದ ದಿನ ಸ್ವಚ್ಛತೆಗೆ ತಂಡ ರಚಿಸಿ ಜಾಗೃತಿ ಮೂಡಿಸುವುದು.
 ತ್ಯಾಜ್ಯಗಳನ್ನು ಬಿಸಾಡಲು ಬಿದಿರಿನ ಬುಟ್ಟಿ, ಡಸ್ಟ್‍ಬಿನ್, ತಗಡಿನ ಡಬ್ಬ ಇತ್ಯಾದಿಗಳನ್ನು ಇಟ್ಟು ಕಸವನ್ನು ಅಲ್ಲಿಯೇ ಹಾಕುವಂತೆ ಭಕ್ತಾದಿಗಳಿಗೆ ಸೂಚನೆ ನೀಡುವ ಫಲಕಗಳನ್ನು ಹಾಕುವುದು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು