Categories: ಮಂಗಳೂರು

ಧ್ವನಿವರ್ಧಕ ಬಳಕೆಗೆ 15 ದಿನದೊಳಗೆ ಅನುಮತಿ: ಡಾ. ರಾಜೇಂದ್ರ ಕೆ.ವಿ

ಮಂಗಳೂರು:  ದ.ಕ.ಜಿಲ್ಲೆಯ ಎಲ್ಲಾ ಧಾರ್ಮಿಕ‌ ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಇನ್ಮುಂದೆ ಜಿಲ್ಲೆಯಲ್ಲಿ ಎಲ್ಲ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯುವುದು ಕಡ್ಡಾಯ ಎಂದು ಆದೇಶದಲ್ಲಿ ಸ್ಪಷ್ಡಪಡಿಸಿದ್ದಾರೆ.

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳು 2000 ಹಾಗೂ ಪರಿಸರ ರಕ್ಷಣೆ ಕಾಯ್ದೆ1986ರಂತೆ ಶಬ್ದ ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳ ಸಭೆ ನಡೆಸಿ ಸಮಿತಿ ರಚಿಸಲಾಗಿದೆ.

ಅದರಂತೆ ಮುಂದಿನ 15 ದಿನಗಳ ಒಳಗಾಗಿ ಎಲ್ಲ ಧಾರ್ಮಿಕ ಕೇಂದ್ರಗಳು ಧ್ವನಿವರ್ಧಕ ಬಳಕೆಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಒಂದು ವೇಳೆ 15 ದಿನಗಳ ಒಳಗಾಗಿ ಅನುಮತಿ ಪಡೆಯದಿದ್ದಲ್ಲಿ ಅಂತಹ ಕೇಂದ್ರಗಳು ಸ್ವಯಂ ಪ್ರೇರಿತವಾಗಿ ಮೈಕ್‌ಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ಅಧಿಕೃತ ಪ್ರಾಧಿಕಾರದಿಂದ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಈ ಕಾಯ್ದೆಯ ಪ್ರಕಾರ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಸಾರ್ವಜನಿಕರು ಯಾವುದೇ ಸಭೆ ಸಮಾರಂಭ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಕೆಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಧ್ವನಿವರ್ಧಕಗಳನ್ನು ಬಳಸಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅನುಮತಿ ಪಡೆದ ನಂತರ ಅತಿಯಾದ ಮೈಕ್ ಬಳಸಿದ್ದಲ್ಲಿ ಕಾನೂನು ಕ್ರಮಕ್ಕೆ ಅವಕಾಶವಿರುವುದಾಗಿ ತಿಳಿಸಿದ್ದಾರೆ.

ಈಗಾಗಲೆ ರಚಿಸಲಾದ ಸಮಿತಿಯು ಅರ್ಜಿಗಳನ್ನು ವಿಲೇವಾರಿ ಮಾಡುವಂತೆಯೂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.

Ashika S

Recent Posts

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

2 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

14 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

20 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

34 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

51 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

1 hour ago