News Karnataka Kannada
Monday, April 29 2024
ಮಂಗಳೂರು

ನಕಲಿ ಕೋವಿಡ್​ ವರದಿ ತಂದಿದ್ದ ನಾಲ್ವರ ಬಂಧನ

Covid
Photo Credit :

ಮಂಗಳೂರು: ನಕಲಿ ಕೋವಿಡ್​ ನೆಗೆಟಿವ್ ವರದಿ ತೋರಿಸಿ ಮಂಗಳೂರು ಪ್ರವೇಶಕ್ಕೆ ಯತ್ನಿಸಿದ ಕೇರಳದ ನಾಲ್ವರನ್ನು ಉಳ್ಳಾಲ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು ಅಬ್ದುಲ್ ತಮೀಮ್ ಬಂಧಿತ ಆರೋಪಿಗಳು. ಈ ನಾಲ್ವರು ಮೊಬೈಲ್ ನಲ್ಲಿ ಎಡಿಟ್ ಮಾಡಿದ್ದ ನಕಲಿ ಆರ್ ಟಿಪಿಸಿಆರ್ ವರದಿ ತೋರಿಸಿ ಮಂಗಳೂರು ಪ್ರವೇಶಕ್ಕೆ ಯತ್ನಿಸಿದ್ದರು. ಬಂಧಿತ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ, ಕೇರಳದಿಂದ ರಾಜ್ಯ ಪ್ರವೇಶಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಇನ್ನು ಕೇರಳದಿಂದ ನೆಗೆಟಿವ್ ವರದಿಯೊಂದಿಗೆ ಮಂಗಳೂರಿಗೆ ಬರುವ ವಿದ್ಯಾರ್ಥಿಗಳಿಗೆ ಏಳು ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. ಏಳು ದಿನಗಳ ನಂತರ ಮತ್ತೊಮ್ಮೆ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು