News Karnataka Kannada
Saturday, May 04 2024
ಮಂಗಳೂರು

ನಕ್ಸಲರ ಜತೆ ನಂಟು ಆರೋಪ ಹೊತ್ತಿದ್ದ ತಂದೆ, ಮಗ ನಿರ್ದೋಷಿ-ಮೂರನೇ ಹೆಚ್ಚುವರಿ ನ್ಯಾಯಾಲಯ ತೀರ್ಪು ಪ್ರಕಟ

New Project 2021 10 22t091734.792
Photo Credit :

ಮಂಗಳೂರು :ನಕ್ಸಲರ ಜತೆ ನಂಟು ಹೊಂದಿದ್ದ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಆತನ ತಂದೆಯ ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.
ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ (35) ಅವರ ತಂದೆ ಲಿಂಗಣ್ಣ (58) ಮಲೆಕುಡಿಯ ನಿರ್ದೋಷಿಗಳು. ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಈ ತೀರ್ಪು ನೀಡಿದ್ದಾರೆ.

ಬೆಳ್ತಂಗಡಿ ಕುತ್ಲೂರು ನಿವಾಸಿಯಾಗಿದ್ದ ವಿಠಲ ಮಲೆಕುಡಿಯ ಅವರನ್ನು 2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ದಳವು ಬಂಧಿಸಿ, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನದ ವೇಳೆ ವಿಠಲ ಮಲೆಕುಡಿಯ ಅವರ ಬಳಿ ಇದ್ದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪುಸ್ತಕಗಳನ್ನು, ಬೈನಾಕ್ಯುಲರ್ ವಶಪಡಿಸಿಕೊಳ್ಳಲಾಗಿತ್ತು.ನಕ್ಸಲರ ಜತೆ ನಂಟು ಹೊಂದಿದ್ದ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಆತನ ತಂದೆಯ ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರನ್ನು ನಿರ್ದೋಷಿ ಎಂದು ಗುರುವಾರ ತೀರ್ಪು ಪ್ರಕಟಿಸಿದೆ.

ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ (35) ಅವರ ತಂದೆ ಲಿಂಗಣ್ಣ (58) ಮಲೆಕುಡಿಯ ನಿರ್ದೋಷಿಗಳು.ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಈ ತೀರ್ಪು ನೀಡಿದ್ದಾರೆ.

ಬೆಳ್ತಂಗಡಿ ಕುತ್ಲೂರು ನಿವಾಸಿಯಾಗಿದ್ದ ವಿಠಲ ಮಲೆಕುಡಿಯ ಅವರನ್ನು 2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ದಳವು ಬಂಧಿಸಿ, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನದ ವೇಳೆ ವಿಠಲ ಮಲೆಕುಡಿಯ ಅವರ ಬಳಿ ಇದ್ದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪುಸ್ತಕಗಳನ್ನು, ಬೈನಾಕ್ಯುಲರ್ ವಶಪಡಿಸಿಕೊಳ್ಳಲಾಗಿತ್ತು.

ಬಂಧನ ಸಮಯದಲ್ಲಿ ವಿಠಲ ಮಲೆಕುಡಿಯ ಮಂಗಳೂರು ವಿವಿಯ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದು, ಜೈಲಿನಲ್ಲಿದ್ದ ಸಮಯದಲ್ಲಿ ಕೈಕೊಳ ತೊಟ್ಟು ಪರೀಕ್ಷೆ ಬರೆದಿದ್ದರು.

ಬಂಧನ ಸಮಯದಲ್ಲಿ ವಿಠಲ ಮಲೆಕುಡಿಯ ಮಂಗಳೂರು ವಿವಿಯ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದು, ಜೈಲಿನಲ್ಲಿದ್ದ ಸಮಯದಲ್ಲಿ ಕೈಕೊಳ ತೊಟ್ಟು ಪರೀಕ್ಷೆ ಬರೆದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು