ಮಂಗಳೂರು

ನಗರದ ಕಾಲೇಜಿನ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ

ಮಂಗಳೂರು :ನಗರದ ಯೆನೆಪೋಯ ಪದವಿ ಕಾಲೇಜಿನ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಈ ಸಂದರ್ಭ ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕೃತ್ಯವೂ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಪ್ರಕರಣದಲ್ಲಿ 7 ಮಂದಿ ವಿದ್ಯಾರ್ಥಿಗಳು ಹಾಗೂ 5 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹಾದ್ , ಅಬು ತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದೆ. ಎರಡು ಘಟನೆಗೆ ಸಂಬಂಧಿಸಿ ಒಟ್ಟು 19 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.

ಯೆನೆಪೋಯ ಕಾಲೇಜ್ ನಲ್ಲಿ 03 ನೇ ವರ್ಷದ ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ಸ್ ವಿದ್ಯಾರ್ಥಿ ಕೇರಳ ಮೂಲದಆದರ್ಶ ಪ್ರೇಮಕುಮಾರ್ ನಿನ್ನೆ ಸಂಜೆ ಸುಮಾರು 7ಗಂಟೆಗೆ ವೇಳೆಗೆ ತನ್ನ ಸ್ನೇಹಿತ ಅಭಿರಾಮಿಯನ್ನು ಭೇಟಿ ಮಾಡಿ ಮಾತನಾಡುತ್ತಿರುವಾಗ ಸಿನಾನ್ ಇತರ 8 ಜನ ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಪ್ರೇಮ್ ಕುಮಾರ್ ಎಡಕೈಗೆ ಗಾಯ ಆಗಿದ್ದು, ಮೊಹಮ್ಮದ್ ನಸಿಪ್ ಗೂ ಗಾಯವಾಗಿದೆ.

ಗಲಾಟೆ ಬಿಡಿಸಲು ಬಂದಿದ್ದ ಪಿರ್ಯಾದಿ ಸ್ನೇಹಿತರಾದ ಅದೇ ಹಾಸ್ಟೇಲ್ ನ ಶನಿನ್ ಮತ್ತು ಶ್ರವಣರವರಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆದರ್ಶ ದೂರು ನೀಡಿದ್ದ. ಗಲಾಟೆ ಬಿಡಿಸಲು ಬಂದಿದ್ದ ತನ್ನ ಸ್ನೇಹಿತರಾದ ಶನಿನ್ ಮತ್ತು ಶ್ರವಣ್ ರವರು ಗುಜ್ಜರಕರೆ ಬಳಿ ಹಾಸ್ಟೆಲ್ ನಲ್ಲಿ ವಾಸ್ತವ ಇದ್ದು ಅವರು ಅಪಾಯದಲ್ಲಿದ್ದು ರಕ್ಷಣೆ ಮಾಡಲು ಕೋರಿಕೊಂಡಿದ್ದ. ಅದರಂತೆ ರಾತ್ರಿ 10 ಗಂಟೆ ಸುಮಾರಿಗೆ ಪಿಎಸ್‌ಐ ಶೀತಲ್ ಹಾಗೂ ಸಿಬ್ಬಂದಿಗಳು ಹಾಸ್ಟೆಲ್ ಬಳಿ ಹೋದಾಗ ಹಾಸ್ಟೆಲ್ ನ ನಿವಾಸಿ ವಿದ್ಯಾರ್ಥಿಗಳು ಇಂಟರ್ ಲಾಕ್, ಕಲ್ಲು ಹಾಗೂ ಕುರ್ಚಿಗಳನ್ನು ಪೊಲೀಸರತ್ತ ಎಸೆದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಸಕ್ತ ಪರಿಸ್ಥಿತಿ ಶಾಂತವಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ತಿಳಿಸಿದ್ದಾರೆ.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

12 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

30 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

52 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago