ಮಂಗಳೂರು: ನನ್ನ ಗೆಲುವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಗೆಲುವು ಎಂದು ರಾಜ್ಯದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ವ್ಯಕ್ತ ಪಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆಯಲ್ಲಿ ಮಾತನಾಡಿದ ಸಚಿವರು, ತಮ್ಮ ವಿಜಯವನ್ನು ಪಕ್ಷದ ಕಾರ್ಯಕರ್ತರಿಗೆ ಸಮರ್ಪಿಸಿದ್ದಾರೆ. ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ ಅವರು, ಖರ್ಚಿಲ್ಲದ ಚುನಾವಣೆ ಗೆದ್ದಿರುವುದಕ್ಕೆ ಸಂತಸ ಇದೆ ಎಂದಿದ್ದಾರೆ.