Categories: ಮಂಗಳೂರು

ನಾಪತ್ತೆಯಾಗಿದ್ದ ಹುಡುಗ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಮಂಗಳೂರು :  ನಾಪತ್ತೆಯಾಗಿದ್ದ ಹದಿನಾರು ವರ್ಷದ ಹುಡುಗನ ಶವ ಹೊಯಿಗೆಬಜಾರ್ ನ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಸ್ನಾನಕ್ಕೆ ಇಳಿದ ಸಾವು ಕಂಡಿದ್ದಾನೆ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶಂತ್ ಮೃತ ಹುಡುಗ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ ಒಂಭತ್ತನೇ ತರಗತಿ ಕಲಿಯುತ್ತಿದ್ದ. ದೃಶಂತ್ ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ ಗೆಳೆಯರ ಜೊತೆ ಕ್ರಿಕೆಟ್ ಆಟ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ .

ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನು ಗೊತ್ತಿಲ್ಲ ಎಂದಿದ್ದರು ಇಂದು ಬೆಳಿಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ನ ಬಳಿ ನದಿಯ ತೀರದಲ್ಲಿ ಪತ್ತೆಯಾಗಿದೆ.

ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ ಅಲ್ಲದೆ ಪ್ಯಾಂಟ್ ಹಾಕಿಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ಥಾನಕ್ಕಿಳಿದು ಮೃತಪಟ್ಟಿದ್ದಾನೆಯೇ ಬೇರೆ ಏನಾದ್ರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Sneha Gowda

Recent Posts

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 min ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

5 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

29 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

37 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

43 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

59 mins ago