News Karnataka Kannada
Monday, April 29 2024
ಮಂಗಳೂರು

ನಾಯ್ಕರ ಸಾಧನೆ ದೇಶಕ್ಕೆ ಮಾತ್ರವಲ್ಲ, ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ

Pejavarashree
Photo Credit : News Kannada

ಬಂಟ್ವಾಳ : ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಹಸಿ ರೈತ ಅಮೈ ಮಹಾಬಲ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ಅತೀವ ಸಂತಸಪಟ್ಟು ಭಕ್ತಿ ಗೌರವದಿಂದ ಬರಮಾಡಿಕೊಂಡರು .

ನಾಯ್ಕರ ತೋಟಕ್ಕೆ ತೆರಳಿದ ಶ್ರೀಗಳು ಭಗೀರಥ ಯತ್ನದಿಂದ ಕೊರೆದ ಸುರಂಗದ ಒಳಹೊಕ್ಕು ವಿಸ್ಮಯಗೊಂಡರು . ಸುರಂಗ ಕೊರೆದು ಗಂಗೆಯನ್ನು ಪಡೆದ ಯಶೋಗಾಥೆಯನ್ನು ನಾಯ್ಕರಿಂದಲೇ ಕೇಳಿ , ತುಂಬಿರುವ ಸಮೃದ್ದ ಜಲಸೆಲೆಯನ್ನು ಕಂಡು ಸಂತಸವ್ಯಕ್ತಪಡಿಸಿದರು . ತೋಟದಲ್ಲಿ ಸಮೃದ್ಧವಾಗಿ ಬೆಳೆದು ನಿಂತು ನಾಯ್ಕರ ಸಾರ್ಥಕ ಶ್ರಮದ ಫಲಕ್ಕೆ ಸಾಕ್ಷಿ ಹೇಳುತ್ತಿರುವ ತೆಂಗು ಕಂಗು , ಬಾಳೆ ಮಾವು ಹಲಸು ಮೊದಲಾದವುಗಳನ್ನು ವೀಕ್ಷಿಸಿದ ಬಳಿಕ ಮನೆಗೆ ಮರಳಿದ ಶ್ರೀಗಳವರಿಗೆ ನಾಯ್ಕರು ಮತ್ತವರ ಮನೆ ಮಂದಿ ಗೌರವಾರ್ಪಣೆಗೈದರು.

ನಾಯ್ಕರ ಕೃಷಿಯ ಅವಿರತ ಸಾಧನೆಯನ್ನು ಮನಸಾರೆ ಬಣ್ಣಿಸಿದ ಶ್ರೀಗಳು ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಅತ್ಯಂತ ಅಭಿನಂದನೀಯ ಎಂದರು . ನಾಯ್ಕರಿಗೆ ಶಾಲು , ಶ್ರೀಕೃಷ್ಣನವಿಗ್ರವಿರುವ ಕಾಷ್ಠಮಂಟಪದ ಸ್ಮರಣಿಕೆ , ನಗದು , ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು . ಸ್ಥಳೀಯರಾದ ಜನಾರ್ದನ ಭಟ್ , ಪಂಚಾಯತ್ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು