News Karnataka Kannada
Sunday, April 28 2024
ಮಂಗಳೂರು

ನಾರಾವಿಯಲ್ಲಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ: ಓರ್ವ ಸಾವು, ಮತ್ತೊರ್ವ ಗಂಭೀರ

Four killed in accident between truck and car
Photo Credit :

ಬೆಳ್ತಂಗಡಿ : ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬೆಳಗ್ಗಿನ ಜಾವ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ನಾರಾವಿ ಗ್ರಾಮದ ರಾಮೆರೆ ಗುತ್ತು ಎಂಬಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದು ಬೈಕಿಗೆ ಡಿಕ್ಕಿಹೊಡೆದ ಅಪರಿಚಿತ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾರೆ.

ಬೈಕ್ ನಲ್ಲಿದ್ದ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮುಕ್ಕುಯಿ ಮನೆಯ ಲಾರೆನ್ಸ್.ಎಮ್.ಜಿ(38) ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಮೃತಪಟ್ಟಿದ್ದಾರೆ. ಇವರೊಂದಿಗಿದ್ದ ನೆಲ್ಲಿಕಾರು ನಿವಾಸಿ ಜಾನ್(81)ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು