ಮಂಗಳೂರು

ನೀರಿನ ಟ್ಯಾಂಕ್ ಗೆ ಬಿದ್ದ ಕಾಡಿನಿಂದ ನೀರು ಕುಡಿಯಲು ಬಂದ ಕಾಡುಕೋಣ

ಬಂಟ್ವಾಳ: ಕಾಡಿನಿಂದ ನೀರು ಕುಡಿಯಲು ಬಂದ ಕಾಡುಕೋಣವೊಂದು ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ಕನ್ಯಾನದಲ್ಲಿ ನಡೆದಿದೆ.
ಕಳೆಂಜೆಮಲೆ ರಕ್ಷಿತಾರಣ್ಯ ಕಾಡಿನಿಂದ ಕಾಡುಕೋಣ ನೀರು ಹುಡುಕಿಕೊಂಡು ನಾಡಿಗೆ ಬಂದಿದೆ.  ಕನ್ಯಾನ ಭಾರತ ಸೇವಾಶ್ರಮದ ನೀರಿನ ಟ್ಯಾಂಕ್ ನಲ್ಲಿ ನೀರು ಯತ್ನಿಸಿದಾಗ ನೇರವಾಗಿ ಕೋಣ ಟ್ಯಾಂಕ್ ಗೆ ಜಾರಿ ಬಿದ್ದಿದೆ.
ಇದರಿಂದ ಮೇಲೆ ಏಳಲಾಗದೇ ಟ್ಯಾಂಕ್ ನೊಳಗಡೆ ಕೋಣ ಬಾಕಿಯಾಗಿದೆ. ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಬೆಳಿಗ್ಗೆ ಆಶ್ರಮ ನಿವಾಸಿಗಳು ನೋಡಿದಾಗ ಘಟನೆ ಬೆಳಕಿಗ್ಗೆ ಬಂದಿದೆ.
ಸ್ಥಳಕ್ಕೆ ವಿಟ್ಲ ಶಾಖೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದು, ಟಾಂಕಿಯ ಒಂದು ಕಡೆಗೆ ಮಣ್ಣು ಹಾಕಿ ಕೋಣ ಹತ್ತಿ‌ಹೋಗಲು ನೆರವಾದರು. ಟ್ಯಾಂಕ್ 5 ಅಡಿ ಆಳವಿದ್ದು, ಕೋಣಕ್ಕೆ ಯಾವುದೇ ಗಾಯಗಳಾಗಿಲ್ಲ ಎಂದು ಅರಣ್ಯ ಸಿಬ್ಬಂದಿಗಳು ತಿಳಿಸಿದ್ದಾರೆ.
Sneha Gowda

Recent Posts

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

7 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

11 hours ago