ಸುಳ್ಯ: ತೂಫಾನ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.